ಕರ್ನಾಟಕ

karnataka

ETV Bharat / bharat

ಸತತ ಮೂರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ - ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದ್ದು, ಪೆಟ್ರೋಲ್ ಲೀಟರ್ ಗೆ 8 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 19 ಪೈಸೆಯಷ್ಟು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಲೀಟರ್​ಗೆ 84 ರೂಪಾಯಿ 18 ಪೈಸೆಯಾಗಿದ್ದು, ಡೀಸೆಲ್ ಬೆಲೆ ಲೀಟರ್​ಗೆ 75 ರೂಪಾಯಿ 14 ಪೈಸೆಯಷ್ಟಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ

By

Published : Nov 22, 2020, 12:34 PM IST

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಸುಮಾರು ಎರಡು ತಿಂಗಳ ನಂತರ ಹೆಚ್ಚಳವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದ್ದು, ಪೆಟ್ರೋಲ್ ಲೀಟರ್ ಗೆ 8 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 19 ಪೈಸೆಯಷ್ಟು ಹೆಚ್ಚಾಗಿದೆ.

ದೆಹಲಿಯಲ್ಲಿ ಲೀಟರ್​ಗೆ 81.38 ರೂ. ಇದ್ದ ಪೆಟ್ರೋಲ್ ಬೆಲೆ 81.46 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರ ಲೀಟರ್‌ಗೆ 70.88 ರೂ.ಗಳಿಂದ 71.07 ರೂ.ಗೆ ಏರಿದೆ.

ಕಳೆದ ಶುಕ್ರವಾರದಿಂದ ಸತತ ಮೂರನೇ ದಿನ ಇಂಧನ ಬೆಲೆ ಹೆಚ್ಚಳವಾಗಿದ್ದು, ಮೂರು ದಿನಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 40 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 61 ಪೈಸೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಲೀಟರ್​ಗೆ 84 ರೂಪಾಯಿ 18 ಪೈಸೆಯಾಗಿದ್ದು, ಡೀಸೆಲ್ ಬೆಲೆ ಲೀಟರ್​ಗೆ 75 ರೂಪಾಯಿ 14 ಪೈಸೆಯಷ್ಟಾಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 88.09 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ದರ 77.34 ರೂ.ನಿಂದ 77.54 ರೂ.ಗೆ ಏರಿದೆ. ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ನ ಪ್ರಮಾಣವನ್ನು ಅವಲಂಬಿಸಿ ದರಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ABOUT THE AUTHOR

...view details