ನವದೆಹಲಿ:ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಖಾಸಗಿ ಸಂಸ್ಥೆಗಳು ತಮ್ಮ ನೌಕರರನ್ನು ಯಾವುದೇ ಕಾರಣ ನೀಡದೆ ಸಾಮೂಹಿಕವಾಗಿ ಕೆಲಸದಿಂದ ವಜಾ ಮಾಡುವ ಆರೋಪ ಕೇಳಿಬಂದಿದೆ. ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಖಾಸಗಿ ವಲಯಗಳ ಉದ್ಯೋಗಿಗಳನ್ನು ವಜಾಗೊಳಿಸುವುದರ ವಿರುದ್ದ ಸುಪ್ರೀಂ ಕೋರ್ಟ್‌ಗೆ ಪಿಐಎಲ್
ಖಾಸಗಿ ವಲಯದವರು ಲಾಕ್‌ಡೌನ್‌ನಿಂದಾಗಿ ಉದ್ಯಮಗಳನ್ನು ಬಂದ್ ಮಾಡಿದ್ದಾರೆ. ಹೀಗಾಗಿ ಕೆಲ ಖಾಸಗಿ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುತ್ತಿವೆ. ಈ ಕುರಿತು ಸುಪ್ರೀಂನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಕಂಪನಿಗಳು ತಮ್ಮ ನೌಕರರಿಗೆ ಜೀವಾನಾಧಾರವಾಗಿ ಕನಿಷ್ಠ ವೇತನ ನೀಡುವಂತೆ ನಿರ್ದೇಶನ ನೀಡಬೇಕೆಂದು ಸುಪ್ರೀಂ ಕೋರ್ಟ್‌ಗೆ ಕೋರಲಾಗಿದೆ.
ಪಿಐಎಲ್ ದಾಖಲು
ಲಾಕ್‌ಡೌನ್‌ನಿಂದಾಗಿ ಖಾಸಗಿ ಕಂಪನಿಗಳು ತಮ್ಮ ನೌಕರರಿಗೆ ಜೀವನಾಧಾರವಾಗಿ ಕನಿಷ್ಠ ವೇತನ ನೀಡಬೇಕು. ತಮ್ಮ ವ್ಯವಹಾರವನ್ನು ನಿಲ್ಲಿಸಿದರೆ, ಕೆಲಸ ಕಳೆದುಕೊಂಡ ನೌಕರರಿಗೆ ಹಣಕಾಸಿನ ನೆರವು ನೀಡಬೇಕೆಂದು ಸರ್ಕಾರ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಕೊವಿಡ್-19 ಸಾಂಕ್ರಾಮಿಕ ಬಿಕ್ಕಟ್ಟಿನಿಂದ ಶಾಲಾ ಶುಲ್ಕವನ್ನು ಕೇಳದಂತೆ ಸರ್ಕಾರ, ಸಚಿವಾಲಯಗಳಿಗೆ ನಿರ್ದೇಶನ ನೀಡಬೇಕೆಂದು ಸಹ ಕೇಳಿಕೊಳ್ಳಲಾಗಿದೆ. ಜೀವನೋಪಾಯದ ಹಕ್ಕನ್ನು ಖಚಿತಪಡಿಸಿಕೊಳ್ಳಲು ಈ ಪಿಐಎಲ್ ಸಲ್ಲಿಸಲಾಗಿದೆ.
Last Updated : Apr 25, 2020, 10:31 AM IST