ಕರ್ನಾಟಕ

karnataka

ETV Bharat / bharat

ಸಿಎಎ ವಿರುದ್ಧ ಕೇರಳ ಹೈಕೋರ್ಟ್​ನಲ್ಲಿ ಪಿಐಎಲ್​ ಸಲ್ಲಿಕೆ - ಕೊಚ್ಚಿ ಸುದ್ದಿ

ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನುಷ್ಠಾನಗೊಳಿಸದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕೇರಳ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್​) ಒಂದು ಸಲ್ಲಿಕೆಯಾಗಿದೆ. ಸಿಎಎ ನೇರವಾಗಿ ಮುಸ್ಲಿಂ ಸಮುದಾಯವನ್ನು ಧರ್ಮ ಮತ್ತು ಹುಟ್ಟಿದ ಸ್ಥಳದ ಆಧಾರದ ಮೇಲೆ ತಾರತಮ್ಯವೆಸಗುತ್ತದೆ ಎಂದು ಪಿಐಎಲ್​ನಲ್ಲಿ ದೂರಲಾಗಿದೆ..

Kerala news
ಪಿಐಎಲ್​ ಸಲ್ಲಿಕೆ

By

Published : Jan 17, 2020, 10:42 AM IST

Updated : Jan 17, 2020, 10:52 AM IST

ಕೊಚ್ಚಿ (ಕೇರಳ) :ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನುಷ್ಠಾನಗೊಳಿಸದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕೇರಳ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್​) ಒಂದು ಸಲ್ಲಿಕೆಯಾಗಿದೆ.

ಸಿಎಎ ಜಾರಿಯಾದರೆ ಮುಸ್ಲಿಮರನ್ನು ಹೊರತುಪಡಿಸಿ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದ ಹಿಂದೂ, ಸಿಖ್ಖ್​, ಕ್ರಿಶ್ಚಿಯನ್, ಪಾರ್ಸಿ, ಜೈನ್​ ಮತ್ತು ಬೌದ್ಧ ಧರ್ಮಗಳ ಅಕ್ರಮ ವಲಸಿಗರಿಗೆ ಅದರಿಂದ ಅನುಕೂಲವಾಗಲಿದೆ. ಅಲ್ಲದೆ ಈ ಕಾಯ್ದೆ ನೇರವಾಗಿ ಮುಸ್ಲಿಂ ಸಮುದಾಯವನ್ನು ಧರ್ಮ ಮತ್ತು ಹುಟ್ಟಿದ ಸ್ಥಳದ ಆಧಾರದ ಮೇಲೆ ತಾರತಮ್ಯವೆಸಗುತ್ತದೆ ಎಂದು ಪಿಐಎಲ್​ನಲ್ಲಿ ದೂರಲಾಗಿದೆ.

ಸಲ್ಲಿಕೆಯಾಗಿರುವ ಪಿಐಎಲ್​ ಮುಖ್ಯ ನ್ಯಾಯಮೂರ್ತಿ ಎಸ್​. ಮಣಿಕುಮಾರ್ ಹಾಗೂ ನ್ಯಾಯಮೂರ್ತಿ ಶಾಜಿ ಪಿ ಚಾಲಿ ನೇತೃತ್ವದ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು, ಸದ್ಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ. ಇನ್ನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿರುವ ನ್ಯಾಯಾಧೀಶರು, ಸಿಎಎ ಬಗ್ಗೆ ಸುಪ್ರೀಂಕೋರ್ಟ್​ನಲ್ಲಿ ಏನೇ ತೀರ್ಮಾನಗಳು ಬಂದರೂ ಅದನ್ನು ನಮ್ಮ ಗಮನಕ್ಕೆ ತರಬೇಕೆಂದು ತಿಳಿಸಿದ್ದಾರೆ. ಸಿಎಎ ವಿರೋಧಿಸಿ ಸುಪ್ರೀಂ ಕೋರ್ಟ್​ನಲ್ಲಿ ಇದುವರೆಗೆ ಒಟ್ಟು 60 ಪಿಐಎಲ್​ ಸಲ್ಲಿಕೆಯಾಗಿದೆ ಎಂದು ಸರ್ಕಾರದ ಪರ ವಕೀಲ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಈಗ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆ ನಡುವೆ ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೊರ್ಟ್​ನಿಂದ ಯಾವುದೇ ತೀರ್ಮಾನಗಳು ಬಂದರೂ ಇದನ್ನು ಆ ತೀರ್ಪಿಗೆ ಒಳಪಡಿಸಲಾಗುತ್ತದೆ ಎಂದು ಹೈಕೋರ್ಟ್ ಅರ್ಜಿದಾರರಿಗೆ ತಿಳಿಸಿದೆ.

Last Updated : Jan 17, 2020, 10:52 AM IST

ABOUT THE AUTHOR

...view details