ತಿರುವನಂತಪುರಂ:ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಷನ್ ಘಟಕದ (ಡಿವೈಎಫ್ಎ) ಅಧ್ಯಕ್ಷ ಮೊಹಮ್ಮದ್ ರಿಯಾಸ್ ಅವರು ಇಂದು ತಿರುವನಂತಪುರಂನಲ್ಲಿ ವಿವಾಹವಾದರು. ಇಬ್ಬರಿಗೂ ಇದು ಎರಡನೇ ಮದುವೆ.
ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಎಂ ಪಿಣರಾಯಿ ವಿಜಯನ್ ಅಧಿಕೃತ ನಿವಾಸ ಕ್ಲಪ್ಹೌಸ್ನಲ್ಲಿ ಇಂದು ಬೆಳಗ್ಗೆ 11ಕ್ಕೆ ಸರಳ ವಿವಾಹ ಜರುಗಿತು. ಸಿಎಂ ಸರ್ಕಾರಿ ನಿವಾಸದಲ್ಲಿ ನಡೆದ ಮೊದಲ ಮದುವೆ ಇದಾಗಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಗಳ ಮದುವೆ ಕೇವಲ ಆಪ್ತರು ಮತ್ತು ಸ್ನೇಹಿತರು ಮಾತ್ರ ಈ ವಿವಾಹದಲ್ಲಿ ಭಾಗವಹಿಸಿದ್ದರು. 50 ಮಂದಿಗಿಂತಲೂ ಕಡಿಮೆ ಜನರು ಮದುವೆಯಲ್ಲಿ ಪಾಲ್ಗೊಂಡಿದ್ದರು. ಕೈಗಾರಿಕೆ ಮತ್ತು ಕ್ರೀಡಾ ಸಚಿವ ಇ.ಪಿ. ಜಯರಾಜನ್ ಮತ್ತು ಸಿಪಿಎಂ ರಾಜ್ಯ ಸಮಿತಿ ಸದಸ್ಯ ಕೋಲಿಯಕೋಡ್ ಕೃಷ್ಣನ್ ನಾಯರ್ ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
2015ರಲ್ಲಿ ರಿಯಾಸ್ ತಮ್ಮ ಮೊದಲ ಪತ್ನಿ ಸಮಿಹಾ ಅವರಿಂದ ಬೇರೆಯಾಗಿದ್ದರು. ಇವರಿಗೆ ಇಬ್ಬರು ಪುತ್ರರಿದ್ದಾರೆ. ವೀಣಾ ಅವರಿಗೆ ಒಬ್ಬ ಪುತ್ರನಿದ್ದಾನೆ. ಐದು ವರ್ಷಗಳ ಹಿಂದೆ ಪತಿಯಿಂದ ದೂರವಾಗಿದ್ದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಗಳ ಮದುವೆ ವೀಣಾ ಅವರು ಬೆಂಗಳೂರಿನ ಎಕ್ಸಾಲೋಜಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ (ಐಟಿ ಕಂಪನಿ) ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದಾರೆ. ಅದಕ್ಕೂ ಮೊದಲು ಅವರು ಒರಾಕಲ್ ಸಂಸ್ಥೆಯಲ್ಲಿ ಕೆಲಸ ಮಾಡಿದ್ದರು. ರಿಯಾಸ್ 2009ನೇ ಲೋಕಸಭೆ ಚುನಾವಣೆಯಲ್ಲಿ ಸಿಪಿಐ(ಎಂ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.