ಚೆನ್ನೈ:ಕೊರೊನಾ ವೈರಸ್ನಿಂದಾಗಿ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ನಲ್ಲಿ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಅವರ ಆರೋಗ್ಯದಲ್ಲಿ ಕಳೆದ ಎರಡು ದಿನಗಳಿಂದ ಸ್ಥಿರತೆ ಇದೆ ಎಂದು ಹೆಲ್ತ್ ಬುಲೆಟಿನ್ ರಿಲೀಸ್ ಆಗಿದೆ.
ಎಸ್ಪಿಬಿ ಆರೋಗ್ಯದಲ್ಲಿ ಸ್ಥಿರತೆ: ಯುಎಸ್, ಯುಕೆ ವೈದ್ಯರಿಂದಲೂ ಚಿಕಿತ್ಸೆ - ಹಿನ್ನಲೆ ಗಾಯಕ ಎಸ್ಪಿಬಿ
ಕಳೆದ 16 ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಬಹುಭಾಷಾ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
SP Balasubrahmanyam
ಆಗಸ್ಟ್ 5ರಂದು ಅಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಆಗಸ್ಟ್ 13ರಂದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ವೆಂಟಿಲೇಟರ್ ಹಾಗೂ ಎಕ್ಮೋ ಮಷಿನ್ನಲ್ಲಿದ್ದಾರೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಆಸ್ಪತ್ರೆಯ ನುರಿತ ಸಿಬ್ಬಂದಿಗಳ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದು, ಯುಎಸ್ ಹಾಗೂ ಯುಕೆ ವೈದ್ಯರಿಂದಲೂ ಸೂಕ್ತ ಮಾಹಿತಿ ಪಡೆದುಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.