ನವದೆಹಲಿ:ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ರಚನೆಯಾಗಿರುವ ಅಯೋಧ್ಯೆ ಮಸೀದಿ ಟ್ರಸ್ಟ್‌ಗೆ ಸರ್ಕಾರಿ ನಾಮನಿರ್ದೇಶಕನನ್ನು ನೇಮಕ ಮಾಡುವಂತೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.
ಅಯೋಧ್ಯೆ ಮಸೀದಿ ಟ್ರಸ್ಟ್‌ಗೆ ಸರ್ಕಾರಿ ನಾಮಿನಿ ನೇಮಕಕ್ಕೆ ನಿರ್ದೇಶಿಸುವಂತೆ ಮನವಿ: ಸುಪ್ರೀಂಗೆ ಅರ್ಜಿ - ಅಯೋಧ್ಯೆ ಪ್ರಕರಣ
ಅಯೋಧ್ಯೆ ಮಸೀದಿ ಟ್ರಸ್ಟ್‌ಗೆ ಸರ್ಕಾರಿ ನಾಮಿನಿಯನ್ನು ನೇಮಕ ಮಾಡಲು ನಿರ್ದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ನ್ಯಾಯವಾದಿ ವಿಷ್ಣು ಜೈನ್ ಮೂಲಕ ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಕೆಯಾಗಿದೆ.
ಅಯೋಧ್ಯೆ ಪ್ರಕರಣದಲ್ಲಿ ಹಿಂದೂಗಳ ಪರ ನ್ಯಾಯವಾದಿ ಕರುಣೇಶ್ ಶುಕ್ಲಾ, ತಮ್ಮ ವಕೀಲ ವಿಷ್ಣು ಜೈನ್ ಮೂಲಕ ಘನ ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್‌ನ ಸೂಚನೆಯ ಮೇರೆಗೆ ಅಯೋಧ್ಯೆಯಲ್ಲಿ ಮಂಜೂರು ಮಾಡಲಾದ ಭೂಮಿಯಲ್ಲಿ ಮಸೀದಿ ಹಾಗೂ ಇದಕ್ಕೆ ಸಂಬಂಧಿಸಿದ ಇತರ ಸೌಲಭ್ಯಗಳನ್ನು ನಿರ್ಮಿಸಲು, ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಯು 15 ಸದಸ್ಯರನ್ನೊಳಗೊಂಡ 'ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್' ಟ್ರಸ್ಟ್ ಅನ್ನು ರಚಿಸಿದೆ. ಈ ಟ್ರಸ್ಟ್‌ಗೆ ಸರ್ಕಾರದಿಂದಲೇ ಓರ್ವ ನಾಮಿನಿ ಬೇಕು ಎಂದು ಉನ್ನತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ.
ಅಯೋಧ್ಯೆ-ಬಾಬರಿ ಮಸೀದಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದ ನವೆಂಬರ್ 9 ರಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿತ್ತು. ರಾಮ ಮಂದಿರದ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿರುವ ಸ್ಥಳವನ್ನು ಹಸ್ತಾಂತರಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ ಅದಕ್ಕಾಗಿ ಒಂದು ಟ್ರಸ್ಟ್ ಅನ್ನು ಶೀಘ್ರದಲ್ಲೇ ರಚಿಸುವಂತೆ ಸೂಚಿಸಿತ್ತು.