ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು, ಅಭ್ಯರ್ಥಿಗಳ ಪಟ್ಟಿ ಸೇರಿದಂತೆ ಮುಂತಾದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಪ್ರಕಾರ ಮಹಾರಾಷ್ಟ್ರದ 288 ಕ್ಷೇತ್ರಗಳ ಪೈಕಿ ಬಿಜೆಪಿ 144 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು ಶಿವಸೇನೆಗೆ 126 ಮತ್ತು ಇತರೆ ಮೈತ್ರಿ ಪಕ್ಷಗಳಿಗೆ 18 ಸ್ಥಾನ ಬಿಟ್ಟುಕೊಡುವ ಸಾಧ್ಯತೆಯಿದೆ.