ಕರ್ನಾಟಕ

karnataka

ETV Bharat / bharat

ದೇಶದ ಕೋವಿಡ್ ಸ್ಥಿತಿಗತಿ ಕುರಿತು ಪ್ರಧಾನಿ ಮೋದಿ ಪರಿಶೀಲನಾ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ನೀತಿ ಆಯೋಗದ ಅಧಿಕಾರಿ, ಸಂಪುಟ ಕಾರ್ಯದರ್ಶಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ದೇಶದ ಕೋವಿಡ್ -19 ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿದ್ದಾರೆ.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ

By

Published : Jul 11, 2020, 5:28 PM IST

ನವದೆಹಲಿ: ದೇಶದ ಕೋವಿಡ್ -19 ಪರಿಸ್ಥಿತಿ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಇಂದು ಪರಿಶೀಲನಾ ಸಭೆ ನಡೆಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ನೀತಿ ಆಯೋಗದ ಅಧಿಕಾರಿ, ಸಂಪುಟ ಕಾರ್ಯದರ್ಶಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮೋದಿ, ದೇಶದ ವಿವಿಧ ಭಾಗಗಳಲ್ಲಿನ ಕೋವಿಡ್​ ಸ್ಥಿತಿಗತಿ ಕುರಿತು ಚರ್ಚಿಸಿದರು.

ಕೊರೊನಾ ಕುರಿತ ಜಾಗೃತಿ ವ್ಯಾಪಕವಾಗಿ ಹರಡಬೇಕು ಹಾಗೂ ಸೋಂಕು ಹರಡುವಿಕೆಯನ್ನು ತಡೆಗಟ್ಟುವಲ್ಲಿ ನಿರಂತರ ಪ್ರಯತ್ನ ಮಾಡಬೇಕು ಎಂದ ಪ್ರಧಾನಿ, ಸಾರ್ವಜನಿಕ ಸ್ಥಳಗಳಲ್ಲಿ ವೈಯಕ್ತಿಕ ನೈರ್ಮಲ್ಯ ಮತ್ತು ಸಾಮಾಜಿಕ ಶಿಸ್ತು ಪಾಲಿಸುವ ಅಗತ್ಯವನ್ನು ಎತ್ತಿಹಿಡಿದರು.

ದೆಹಲಿಯಲ್ಲಿ ಸೋಂಕಿನ ಪ್ರಮಾಣದಲ್ಲಿ ನಿಯಂತ್ರಿಸುವಲ್ಲಿ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳ ಸಮಗ್ರ ಪ್ರಯತ್ನವನ್ನು ಪ್ರಧಾನಿ ಶ್ಲಾಘಿಸಿದರು. ಹಾಗೆಯೇ ಇತರ ರಾಜ್ಯ ಸರ್ಕಾರಗಳು ಇದೇ ರೀತಿಯ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಭಾರತದಲ್ಲಿ ಈವರೆಗೆ 8,20,916 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 22,123ಕ್ಕೆ ಏರಿಕೆಯಾಗಿದೆ. ಕೊರೊನಾ ಪೀಡಿತ ವಿಶ್ವದ ರಾಷ್ಟ್ರಗಳ ಪೈಕಿ ಭಾರತ 3ನೇ ಸ್ಥಾನದಲ್ಲಿದೆ.

ABOUT THE AUTHOR

...view details