ಕರ್ನಾಟಕ

karnataka

ETV Bharat / bharat

370ನೇ ವಿಧಿ ರದ್ದು: ಇಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಸಾಧ್ಯತೆ! - ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸುವ ವಿಚಾರದ ಕುರಿತಾಗಿ ಪ್ರಧಾನಿ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಧಾನಿ ಮೋದಿ

By

Published : Aug 8, 2019, 7:29 AM IST

ನವದೆಹಲಿ: ಎರಡನೇ ಅವಧಿಗೆ ಪ್ರಧಾನಿ ಪಟ್ಟಕ್ಕೆ ಬಂದಿರುವ ಮೋದಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಿದ್ದು, ಅದರಂತೆ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಇದೇ ವಿಚಾರದ ಕುರಿತು ಮೋದಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸುವ ವಿಚಾರದ ಕುರಿತಾಗಿ ಪ್ರಧಾನಿ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾರ್ಚ್​ 27ರಂದು ಪ್ರಧಾನಿ ಮೋದಿ ಕೊನೆಯದಾಗಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಈ ವೇಳೆ ಭಾರತ ಬಾಹ್ಯಾಕಾಶದಲ್ಲೂ ಶತ್ರು ರಾಷ್ಟ್ರವನ್ನು ಹಿಮ್ಮೆಟ್ಟಿಸುವ ತಾಕತ್ತು ಹೊಂದಿದೆ ಮತ್ತು ಅದರ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ ಎಂದಿದ್ದರು.

ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್​ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದೆ.

ABOUT THE AUTHOR

...view details