ನವದೆಹಲಿ:ಚೀನಾ ವಿಚಾರವಾಗಿ ಒಂದು ನಿರ್ಧಾರಕ್ಕೆ ಬರುವ ಕುರಿತು ಚರ್ಚಿಸಲು 'ವಿಸ್ತೃತ' ಜಿ-7 ರಾಷ್ಟ್ರಗಳ ಸಭೆಯಲ್ಲಿ ಭಾಗವಹಿಸಬೇಕೆಂಬ ಟ್ರಂಪ್ ಪ್ರಸ್ತಾಪವನ್ನು ಪ್ರಧಾನಿ ಮೋದಿ ಒಪ್ಪಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕಳೆದ ಮಂಗಳವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಮಾತನಾಡಿದ್ದರು. ಈ ವೇಳೆ ಭವಿಷ್ಯದಲ್ಲಿ ಚೀನಾ ವಿಚಾರವಾಗಿ ಚರ್ಚಿಸಲು ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳ ಸಮೂಹವಾದ 'ವಿಸ್ತರಿತ ಜಿ7' ನ ಭಾಗವಾಗಲು ಟ್ರಂಪ್ ಅವರ ಪ್ರಸ್ತಾಪವನ್ನು ಮೋದಿ ಒಪ್ಪಿಕೊಂಡಿದ್ದಾರೆ.
ಈ ವಾರದ ಆರಂಭದಲ್ಲಿ ಈ ಶೃಂಗಸಭೆಯನ್ನು ಸೆಪ್ಟೆಂಬರ್ವರೆಗೆ ಮುಂದೂಡಲು ಟ್ರಂಪ್ ನಿರ್ಧರಿಸಿದ್ದರು. ಅಲ್ಲದೇ ಭಾರತ, ರಷ್ಯಾ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಕೊರಿಯಾವನ್ನು ಈ ಸಭೆಗೆ ಆಹ್ವಾನಿಸಿ ಚೀನಾದೊಂದಿಗೆ ಭವಿಷ್ಯದಲ್ಲಿ ನಡೆದುಕೊಳ್ಳಬೇಕಾದ ಬಗೆಯ ಬಗ್ಗೆ ಚರ್ಚಿಸಲು ಟ್ರಂಪ್ ನಿರ್ಧರಿಸಿದ್ದಾರೆ.