ಅಯೋಧ್ಯೆ (ಉತ್ತರ ಪ್ರದೇಶ):ಇಂದು ಅಯೋಧ್ಯೆ ಮಾತ್ರವಲ್ಲ, ವಿಶ್ವದೆಲ್ಲೆಡೆ ಶ್ರೀರಾಮನ ಜಪ ಕೇಳುತ್ತಿದೆ. ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಲು ನನ್ನನ್ನು ಆಹ್ವಾನಿಸಿದ್ದಕ್ಕೆ ನಾನು ಋಣಿಯಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದರು.
ರಾಮ ನಾಮ ಇಂದು ವಿಶ್ವದೆಲ್ಲೆಡೆ ಮಾರ್ದನಿಸುತ್ತಿದೆ: ಪ್ರಧಾನಿ ಮೋದಿ - ಉತ್ತರ ಪ್ರದೇಶ ಸುದ್ದಿ
ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಪ್ರಧಾನಿ ನರೇದ್ರ ಮೋದಿ ಅವರು ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ ಹಿರಿಯರಿಗೆ ಕೃತಜ್ಞತೆ ಸಲ್ಲಿಸಿದರು.
ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ರಾಮಮಂದಿರದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂದು ಇಡೀ ದೇಶವೇ ರೋಮಾಂಚನಗೊಂಡಿದೆ. ಹಿರಿಯರ ತ್ಯಾಗ, ಬಲಿದಾನದಿಂದ ಇಂದು ರಾಮಮಂದಿರದ ಕನಸು ನನಸಾಗುತ್ತಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವ ಅವಕಾಶ ನನಗೆ ಸಿಕ್ಕಿದೆ.
ರಾಮಮಂದಿರಕ್ಕೆ ಹೋರಾಟದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ನಾನು ನಮಿಸುತ್ತೇನೆ. ಅವರೆಲ್ಲರ ಪರಿಶ್ರಮದಿಂದಲೇ ಇಂದು ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆ ಮುಕ್ತವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
Last Updated : Aug 5, 2020, 2:01 PM IST