ನವದೆಹಲಿ: ಉತ್ತರ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಟ್ವಿಟ್ಟರ್ನಲ್ಲಿ ತಿಳಿಸಿದೆ. '' ಆಗ್ರಾ- ಲಖನೌ ಎಕ್ಸ್ಪ್ರೆಸ್ ವೇನಲ್ಲಿ ನಡೆದ ದುರಂತಕ್ಕೆ ತೀವ್ರ ಸಂತಾಪವಿದೆ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ದೇವರು ನೋವು ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಬೇಗ ಚೇತರಿಕೆಗೊಳ್ಳಲಿ'' ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಟ್ವಿಟ್ಟರ್ನಲ್ಲಿ ಸ್ಪಷ್ಟಪಡಿಸಿದೆ.
ಲಖನೌ- ಆಗ್ರಾ ಎಕ್ಸ್ಪ್ರೆಸ್ವೇ ದುರಂತಕ್ಕೆ ಮೋದಿ ಸಂತಾಪ: ಪ್ರಧಾನಿ ಕಚೇರಿಯಿಂದ ಟ್ವೀಟ್ - ಪ್ರಧಾನಿ ಕಾರ್ಯಾಲಯ
ಉತ್ತರ ಪ್ರದೇಶದಲ್ಲಿ ನಡೆದ ರಸ್ತೆ ದುರಂತಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಟ್ವಿಟರ್ನಲ್ಲಿ ಸ್ಪಷ್ಟಪಡಿಸಿದೆ.
ಉತ್ತರ ಪ್ರದೇಶ ರಸ್ತೆ ದುರಂತಕ್ಕೆ ಮೋದಿ ಸಂತಾಪ
ಉತ್ತರ ಪ್ರದೇಶದ ಫಿರೋಜಾಬಾದ್ ಬಳಿ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. 14 ಮಂದಿ ಸಾವನ್ನಪ್ಪಿ, 6ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳಿಗೆ ಸೈಫಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.