ನವದೆಹಲಿ: ಅರ್ಥಶಾಸ್ತ್ರ ವಿಭಾಗದಲ್ಲಿ ಭಾರತ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಗೆ ನೊಬೆಲ್ ಗೌರವ ಸಿಕ್ಕಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಕೆ ಮಾಡಿ ಟ್ವೀಟ್ ಮಾಡಿದ್ದಾರೆ.
ಅಭಿಜಿತ್ ಬ್ಯಾನರ್ಜಿಗೆ ನೊಬೆಲ್... ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ - ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ
ಅರ್ಥಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಗೆದ್ದಿರುವ ಅಭಿಜಿತ್ ಬ್ಯಾನರ್ಜಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಗೌರವ ಸಲ್ಲಿಕೆ ಮಾಡಿದ್ದಾರೆ.
2019ನೇ ಸಾಲಿನ ಅರ್ಥಶಾಸ್ತ್ರ ವಿಭಾಗದಲ್ಲಿನ ನೊಬೆಲ್ ಪ್ರಶಸ್ತಿ ಭಾರತ ಮೂಲದ ಅಭಿಜಿತ್ ಬ್ಯಾನರ್ಜಿ ಸೇರಿದಂತೆ ಮೂವರಿಗೆ ಸಿಕ್ಕಿದೆ. ಅಭಿಜಿತ್ಗೆ ಈ ಗೌರವ ಸಿಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿವ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಬಡತನ ನಿವಾರಣಾ ಕ್ಷೇತ್ರದಲ್ಲಿ ಅಭಿಜಿತ್ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು ಎಂದಿರುವ ನಮೋ, ಪ್ರಶಸ್ತಿ ಗೆದ್ದ ಎಸ್ತರ್ ಡಪ್ಲೋ ಹಾಗೂ ಮಿಶೆಲ್ ಕ್ರೀಮಗೂ ನಾನು ಅಭಿನಂಧಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಜಾಗತಿಕ ಬಡತನ ನಿರ್ಮೂನೆಗಾಗಿ ಕೈಗೊಂಡ ಪ್ರಾಯೋಗಿಕ ಅಧ್ಯಯನಕ್ಕಾಗಿ ಅಭಿಜಿತ್ ಬ್ಯಾನರ್ಜಿ ಸೇರಿ ಮೂವರು ಅರ್ಥಶಾಸ್ತ್ರಜ್ಞರನ್ನು ಇಂದು ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.