ಜಲ್ಗಾಂವ್(ಮಹಾರಾಷ್ಟ್ರ): ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೊದಿ ಕಾಂಗ್ರೆಸ್ ನಾಯಕರಿಗೆ ಚಾಲೆಂಜ್ ಮಾಡಿದ್ದಾರೆ.
ಪ್ರಣಾಳಿಕೆಯಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರ್ತೇವೆ ಎಂದು ಹೇಳಿ: ಕೈ ನಾಯಕರಿಗೆ ಮೋದಿ ಸವಾಲು
ಮಹಾರಾಷ್ಟ್ರದ ವಿಧಾನಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಮೋದಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನ ರದ್ಧುಗೊಳಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾನು ಕಾಂಗ್ರೆಸ್ ನಾಯಕರಿಗೆ ಒಂದು ಸವಾಲು ಹಾಕುತ್ತೇನೆ. ನಿಮಗೆ ಸಾಧ್ಯವಾದರೆ 370ನೇ ವಿಧಿಯನ್ನ ಮತ್ತೆ ಜಾರಿಗೆ ತರುತ್ತೇವೆ ಎಂದು ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿ ಎಂದು ಸವಾಲು ಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ, ವಿಭಜನೆ ಎಂಬ ಮಾತುಗಳೇ ಕೇಳಿ ಬರುತ್ತಿದ್ದವು. ಆದ್ರೆ ಜಮ್ಮು ಮತ್ತು ಕಾಶ್ಮೀರ ಈಗ ಶಾಂತಿಯ ನೆಲೆಗಳಾಗಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.