ನವದೆಹಲಿ:ಓಣಂ ಹಬ್ಬಕ್ಕೆ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಶುಭ ಹಾರೈಸಿದ್ದಾರೆ. ಸಾಮರಸ್ಯವಾಗಿ ಆಚರಿಸುವ ವಿಶಿಷ್ಟ ಹಬ್ಬ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜನರಿಗೆ ಶುಭಾಶಯ ಕೋರಿದ್ದಾರೆ. ಭಾನುವಾರ ತಮ್ಮ ಮನ್ ಕಿ ಬಾತ್ನಲ್ಲಿ ಹಬ್ಬದ ಬಗ್ಗೆ ಪ್ರಸ್ತಾಪಿಸಿದ್ದ ಕ್ಲಿಪ್ಅನ್ನು ಸಹ ಪೋಸ್ಟ್ ಮಾಡಿದ್ದಾರೆ.
ಇನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಓಣಂ ವಿಶೇಷ ಹಬ್ಬವಾಗಿದ್ದು, ಇದು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಆಚರಣೆಯಾಗಿದೆ. ಇಳೆಗೆ ಹೊಸ ಜೀವ ನೀಡುವ ಹಬ್ಬ ಇದಾಗಿದೆ. ಸಮಾಜದ ಕೆಳ ವರ್ಗದ ಜನರ ಆರೈಕೆಗಾಗಿ ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.