ಕರ್ನಾಟಕ

karnataka

ETV Bharat / bharat

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಪ್ರಧಾನಿ ಮೋದಿ ಅಭಿನಂದನೆ - ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ

ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಹೆಣ್ಣು ಮಗುವಿಗೆ ಶಿಕ್ಷಣ, ಉತ್ತಮ ಆರೋಗ್ಯ ಸೇವೆಯನ್ನು ಸುಧಾರಿಸುವುದು ಸೇರಿದಂತೆ ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದ್ದಾರೆ.

National Girl Child Day
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

By

Published : Jan 24, 2021, 12:32 PM IST

ನವದೆಹಲಿ:ಹೆಣ್ಣು ಮಕ್ಕಳ ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಸುಧಾರಿಸುವುದು ಸೇರಿದಂತೆ ಹೆಣ್ಣು ಮಕ್ಕಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತವು ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಆಚರಿಸುತ್ತದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು, ನಮ್ಮ ದೇಶದ ಹೆಣ್ಣು ಮಕ್ಕಳಿಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಮಹಿಳೆಯರಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಲಕ್ಕಾಡ್ ಜಿಲ್ಲೆಯ ಸ್ಮಶಾನದಲ್ಲಿ ಜಾತಿ ತಾರತಮ್ಯ ಆರೋಪ

ಹೆಣ್ಣು ಮಗುವಿಗೆ ಶಿಕ್ಷಣ, ಉತ್ತಮ ಆರೋಗ್ಯ ಸೇವೆಯನ್ನು ಸುಧಾರಿಸುವುದು ಸೇರಿದಂತೆ ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಮೋದಿ ಹೇಳಿದ್ದಾರೆ.

ಹೆಣ್ಣು ಮಗುವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಎಲ್ಲರನ್ನೂ ವಿಶೇಷವಾಗಿ ಪ್ರಶಂಸಿಸುವ ದಿನ ಇದಾಗಿದೆ ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details