ನವದೆಹಲಿ:ದೇಶದಲ್ಲಿ ಏಪ್ರಿಲ್ 30ರವರೆಗೆ ಲಾಕ್ಡೌನ್ ಮುಂದುವರಿಯುವುದು ಬಹುತೇಕ ಖಚಿತಗೊಂಡಿದ್ದು, ಪ್ರಧಾನಿ ಮೋದಿ ರಾತ್ರಿ 8ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಿ ಇದೇ ವಿಷಯ ಹೊರಹಾಕಲಿದ್ದಾರೆ ಎಂದು ಟ್ವೀಟ್ ಮೂಲಕ ಸುಳಿವು ನೀಡಿದ್ದಾರೆ.
ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಮೋ ವಿಡಿಯೋ ಸಂವಾದದ ಮೂಲಕ ಮಾತನಾಡಿ ಮಹತ್ವದ ಮಾಹಿತಿ ಪಡೆದುಕೊಂಡಿದ್ದು, ಈ ವೇಳೆ ಅನಿವಾರ್ಯವಾಗಿ ಲಾಕ್ಡೌನ್ ವಿಸ್ತರಣೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ಇದೇ ವಿಷಯವಾಗಿ ಟ್ವೀಟ್ ಮೂಲಕ ಮಾಹಿತಿ ಹೊರಹಾಕಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ಲಾಕ್ಡೌನ್ ವಿಸ್ತರಣೆ ಮಾಡುವ ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ. ಅಭಿವೃದ್ಧಿ ಹೊಂದಿರುವ ದೇಶಗಳಿಗಿಂತಲೂ ನಮ್ಮ ಸ್ಥಿತಿ ಉತ್ತಮವಾಗಿದೆ. ಇದಕ್ಕೆ ಕಾರಣ ನಾವು ಮುಂಚಿತವಾಗಿ ಲಾಕ್ಡೌನ್ ಘೋಷಣೆ ಮಾಡಿರುವುದು. ತಕ್ಷಣ ಲಾಕ್ಡೌನ್ ಹಿಂದಕ್ಕೆ ಪಡೆದುಕೊಂಡರೆ ಎಲ್ಲವೂ ಹಾಳಾಗಲಿದ್ದು, ನಡು ನೀರಿನಲ್ಲಿ ಕೊಚ್ಚಿಕೊಂಡ ಹೋದಂತೆ ಆಗಲಿದೆ. ಎಲ್ಲವನ್ನೂ ಉಳಿಸಿಕೊಳ್ಳಬೇಕಾದರೆ ಲಾಕ್ಡೌನ್ ವಿಸ್ತರಣೆ ಅನಿವಾರ್ಯ ಎಂದು ಟ್ವೀಟ್ ಮಾಡಿದ್ದಾರೆ.
ನವದೆಹಲಿಯಲ್ಲಿ 900ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಸಿಕ್ಕಿರುವ ಕಾರಣ ಅನಿವಾರ್ಯವಾಗಿ ನಾವು ಲಾಕ್ಡೌನ್ ವಿಸ್ತರಣೆ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕೂ ರೈಲು, ಬಸ್ ಸಂಚಾರ ಆರಂಭಿಸದಂತೆ ಸೂಚನೆ ನೀಡಿದ್ದೇವೆ ಎಂದಿದ್ದಾರೆ.