ನವದೆಹಲಿ:ದೇಶದ ಕೆಲವೊಂದು ರಾಜ್ಯಗಳಲ್ಲಿ ಮಹಾಮಾರಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದ್ದು, ಅಲ್ಲಿ ತೆಗೆದದುಕೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ಏಳು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು.
ಕರ್ನಾಟಕ, ಆಂಧ್ರಪ್ರದೇಶ, ಉತ್ತರಪ್ರದೇಶ, ತಮಿಳುನಾಡು, ಪಂಜಾಬ್, ದೆಹಲಿ ಹಾಗೂ ಮಹಾರಾಷ್ಟ್ರ ಸಿಎಂಗಳು, ಆರೋಗ್ಯ ಸಚಿವರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ವೇಳೆ ರೋಗ ಹರಡುವಿಕೆ ತಡೆಯಲು ರಾಜ್ಯಗಳು ಕೈಗೊಂಡಿರುವ ಪ್ರಯತ್ನಕ್ಕೆ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಏಳು ರಾಜ್ಯಗಳಲ್ಲಿ ಶೇ.63ಕ್ಕಿಂತಲೂ ಅಧಿಕ ಕೊರೊನಾ ಸೋಂಕಿತ ಪ್ರಕರಣಗಳಿದ್ದು,ಹೀಗಾಗಿ ಪ್ರಧಾನಿ ಮೋದಿ ಮಹತ್ವದ ಸೂಚನೆ ನೀಡಿದ್ದಾರೆ. ಮಾಸ್ಕ್ ಹಾಕಿಕೊಳ್ಳುವುದನ್ನ ಅಭ್ಯಾಸ ಮಾಡಿಕೊಳ್ಳುವುದು ಕಷ್ಟ. ಆದರೆ ನಾವು ಅದನ್ನ ನಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳದಿದ್ದರೆ ನಮಗೆ ಬೇಕಾದ ಫಲಿತಾಂಶ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.