ನವದೆಹಲಿ:ದೇಶದಲ್ಲಿ ಕೊರೊನಾ ವೈರಸ್ ರೌದ್ರನರ್ತನ ಜೋರಾಗಿದ್ದು, ಇದರ ಮಧ್ಯೆ ಎಲ್ಲ ರಾಜ್ಯದ ಸಿಎಂಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಡಿಯೋ ಕಾನ್ಪರೆನ್ಸ್ ನಡೆಸಿ ಮಹತ್ವದ ಮಾಹಿತಿ ಪಡೆದುಕೊಂಡರು.
ಎಲ್ಲ ರಾಜ್ಯದ ಸಿಎಂಗಳೊಂದಿಗೆ ನಮೋ ಸಂವಾದ... ಮಹತ್ವದ ಮಾಹಿತಿ ಪಡೆದುಕೊಂಡ ನಮೋ! - ವಿಡಿಯೋ ಕಾನ್ಪರೆನ್ಸ್
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಎಲ್ಲ ರಾಜ್ಯದ ಸಿಎಂಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದರು.
![ಎಲ್ಲ ರಾಜ್ಯದ ಸಿಎಂಗಳೊಂದಿಗೆ ನಮೋ ಸಂವಾದ... ಮಹತ್ವದ ಮಾಹಿತಿ ಪಡೆದುಕೊಂಡ ನಮೋ! PM Modi holds video conference with CMs on coronavirus](https://etvbharatimages.akamaized.net/etvbharat/prod-images/768-512-6631518-thumbnail-3x2-wdfdfdfd.jpg)
ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ನವದೆಹಲಿ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲರೂ ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಕೊರೊನಾ ವೈರಸ್ ಪರಿಸ್ಥಿತಿ ಹಾಗೂ ಸೋಂಕು ಹರಡುವುದನ್ನ ತಡೆಗಟ್ಟಲು ವಿವಿಧ ರಾಜ್ಯಗಳು ಕೈಗೊಂಡಿದ್ದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದ ನಮೋ ಇದು ಅದು ಎಷ್ಟರ ಮಟ್ಟಿಗೆ ಸಫಲವಾಗಿದೆ ಎಂಬುದರ ಮಾಹಿತಿ ಪಡೆದುಕೊಂಡರು. ವಿಡಿಯೋ ಸಂವಾದದ ವೇಳೆ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು.
ಕರ್ನಾಟಕ,ಮಹಾರಾಷ್ಟ್ರ,ಕೇರಳ,ಉತ್ತರಪ್ರದೇಶ, ತೆಲಂಗಾಣದಲ್ಲಿ ಹೆಚ್ಚಿನ ಪ್ರಕರಣ ಕಂಡು ಬಂದಿರುವ ಕಾರಣ ಹೆಚ್ಚು ನಿಗಾ ವಹಿಸುವಂತೆ ಸಿಎಂಗಳಿಗೆ ನಮೋ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜತೆ ದೂರವಾಣಿ ಮೂಲಕ ಮಾತನಾಡಿ ರಾಜ್ಯದಲ್ಲಿನ ಮಾಹಿತಿ ಪಡೆದುಕೊಂಡಿದ್ದ ನಮೋ ಇಂದು ಅವರೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದರು.