ನವದೆಹಲಿ: ಕೊರೊನಾ ವೈರಸ್ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆನಡೆಸುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಸೆಪ್ಟೆಂಬರ್ 23 ರಂದು ಸಭೆ ನಡೆಯುವ ಸಾಧ್ಯತೆ ಇದೆ. ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಪರಿಸ್ಥಿತಿ ಹೆಚ್ಚು ಗಂಭೀರವಾಗಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಂದ್ರೀಕರಿಸಿ ದೇಶಾದ್ಯಂತ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನಿಯಮಿತವಾಗಿ ಸಭೆ ನಡೆಸುತ್ತಿದ್ದಾರೆ.
ಕೊನೆಯದಾಗಿ ಆಗಸ್ಟ್ 11 ರಂದು ಹೆಚ್ಚು ಸೋಂಕು ಪೀಡಿತ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಪರಿಶೀಲನಾ ಸಭೆ ನಡೆಸಿದ್ದರು.