ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಉಭಯ ನಾಯಕರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಹತ್ತರ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
ರಾಷ್ಟ್ರಪತಿ-ಪ್ರಧಾನಿ ಭೇಟಿ: ರಾಷ್ಟ್ರೀಯ-ಅಂತಾರಾಷ್ಟ್ರೀಯ ವಿಷಯಗಳ ಕುರಿತು ಚರ್ಚೆ - ರಾಷ್ಟ್ರಪತಿ ಭವನ
ರಾಮ್ ನಾಥ್ ಕೋವಿಂದ್ರನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ರಾಷ್ಟ್ರೀಯ-ಅಂತಾರಾಷ್ಟ್ರೀಯ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ರಾಷ್ಟ್ರಪತಿ ಭವನ ತನ್ನ ಟ್ವೀಟರ್ ಖಾತೆಯಲ್ಲಿ ತಿಳಿಸಿದೆ.
ರಾಷ್ಟ್ರಪತಿ-ಪ್ರಧಾನಿ ಭೇಟಿ
ಭೇಟಿ ಬಳಿಕ, "ರಾಮ್ ನಾಥ್ ಕೋವಿಂದ್ರನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ರಾಷ್ಟ್ರೀಯ-ಅಂತಾರಾಷ್ಟ್ರೀಯ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ" ಎಂದು ರಾಷ್ಟ್ರಪತಿ ಭವನ ತನ್ನ ಟ್ವೀಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದೆ.
ಗಾಲ್ವಾನ್ ಸಂಘರ್ಷದ ಬಳಿಕ ಪಿಎಂ ಮೋದಿ ಲಡಾಖ್ನ ಲೇಹ್ ಪ್ರದೇಶಕ್ಕೆ ಜುಲೈ 3 ರಂದು ಭೇಟಿ ನೀಡಿ ಸೈನಿಕರನ್ನುದ್ದೇಶಿಸಿ ಮಾತನಾಡಿದ್ದರು. ಲೇಹ್ ಭೇಟಿ ಬಳಿಕ ಇಂದು ರಾಷ್ಟ್ರಪತಿ ಜೊತೆ ಮಾತುಕತೆ ನಡೆಸಿದ್ದಾರೆ.