ಫ್ರಾನ್ಸ್:ಇಲ್ಲಿನ ಬಿಯಾರಿಟ್ಸ್ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಕಾಶ್ಮೀರ ವಿಚಾರವಾಗಿ ಮಾತನಾಡಿದ್ದಾಗಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದ್ವಿಪಕ್ಷೀಯವಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾಹಿತಿ ನೀಡಿದರು. ನಾವು ಜಮ್ಮು-ಕಾಶ್ಮೀರದ ವಿಚಾರವಾಗಿ ಮಾತುಕತೆ ನಡೆಸಿದ್ದು, ಅಲ್ಲಿನ ಪರಿಸ್ಥಿತಿ ಸಂಪೂರ್ಣವಾಗಿ ಹತೋಟಿಯಲ್ಲಿದೆ ಎಂದು ಮೋದಿ ಟ್ರಂಪ್ಗೆ ತಿಳಿಸಿದ್ದಾರೆ. ಜತೆಗೆ ಇದೊಂದು ದ್ವಿಪಕ್ಷೀಯ ಸಮಸ್ಯೆಯಾಗಿದ್ದು, ಇನ್ನೊಂದು ದೇಶಕ್ಕೆ ಈ ವಿಷಯದ ಸಮಸ್ಯೆ ತೆಗೆದುಕೊಂಡು ಹೋಗಿ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದು ಸಹ ಮೋದಿ ಹೇಳಿದ್ದಾರೆ.