ನವದೆಹಲಿ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಮತ್ತೆ ವಾಗ್ಬಾಣ ಮುಂದುವರಿಸಿದ್ದಾರೆ. ದೇಶದಲ್ಲಿ ಎಷ್ಟೆಲ್ಲ ಸಮಸ್ಯೆಗಳಿದ್ದರೂ ಆ ಬಗ್ಗೆ ಮಾತಾಡದೆ, ಹಿಮಾಚಲ ಪ್ರದೇಶದ ರೊಹ್ಟಾಂಗ್ನಲ್ಲಿ ಅಟಲ್ ಟನಲ್ ಉದ್ಘಾಟನೆಯಂಥ ಕಾರ್ಯಕ್ರಮಗಳಲ್ಲಿ ಪ್ರಧಾನಿಯವರು ತೊಡಗಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಪಂಜಾಬ್ನ ಖೇತಿ ಬಚಾವೋ ಯಾತ್ರಾ (ಕೃಷಿ ಉಳಿಸಿ ಯಾತ್ರೆ) ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಪ್ರಧಾನಿ ಮೋದಿಯರವರೇ ಅಟಲ್ ಸುರಂಗದಲ್ಲಿ ನಿಂತು ಕೈ ಬೀಸುವುದನ್ನ ನಿಲ್ಲಿಸಿ, ದೇಶದ ಸಮಸ್ಯೆಗಳ ಬಗ್ಗೆ ಮಾತಾಡಿ, ಮೌನ ಮುರಿಯಿರಿ, ಜನತೆ ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಿ ಎಂದು ಆಗ್ರಹಿಸಿದರು. ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹಥ್ರಾಸ್ ಘಟನೆ ನಡೆದು ವಾರ ಕಳೆದರೂ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತು ನಿರುದ್ಯೋಗ ಹೆಚ್ಚುತ್ತಿದ್ದು, ಜಿಡಿಪಿ ಕುಸಿಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.