ಕರ್ನಾಟಕ

karnataka

ETV Bharat / bharat

ಕರುನಾಡಲ್ಲಿ ಭೀಕರ ಪ್ರವಾಹ: ಬಿಎಸ್​ವೈ ಜತೆ ಮೋದಿ ಮಾತು, ಸಹಾಯದ ಭರವಸೆ! - ಬಿಎಸ್​ವೈ ಜತೆ ಮೋದಿ ಪ್ರವಾಹ ವಿಚಾರವಾಗಿ ಮಾತು

ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭೀಕರ ಪ್ರವಾಹ ವಿಚಾರವಾಗಿ ಬಿಎಸ್​ವೈ ಜತೆ ಮಾತನಾಡಿರುವ ಪ್ರಧಾನಿ ಮೋದಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

PM Modi
PM Modi

By

Published : Oct 16, 2020, 9:18 PM IST

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರದಿಂದಾಗಿ ಕರ್ನಾಟಕದ ಕೆಲ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಪ್ರಮುಖವಾಗಿ ಬೀದರ್​, ಕಲಬುರಗಿ, ರಾಯಚೂರು ಸೇರಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಸಿಎಂ ಬಿಎಸ್​​ ಯಡಿಯೂರಪ್ಪ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದರು. ಈ ವೇಳೆ, ಪ್ರವಾಹದಿಂದ ಉಂಟಾಗಿರುವ ನಷ್ಟದ ಬಗ್ಗೆ ಬಿಎಸ್​ವೈರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಪ್ರವಾಹದಿಂದ ತೊಂದರೆಗೊಳಗಾಗಿರುವ ಕರ್ನಾಟಕದ ನಮ್ಮ ಸಹೋದರಿಯರು ಮತ್ತು ಸಹೋದರರೊಂದಿಗೆ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಪರಿಹಾರ ಕಾರ್ಯಗಳಲ್ಲಿ ಕೇಂದ್ರದಿಂದ ಸಾಧ್ಯವಾಗುವ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದೇ ವೇಳೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜತೆ ಕೂಡ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದು, ಎಲ್ಲ ರೀತಿಯ ಸಹಾಯಹಸ್ತ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ತೆಲಂಗಾಣ, ಆಂಧ್ರ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ವರುಣಾರ್ಭಟ ಜೋರಾಗಿದ್ದು, ತೆಲಂಗಾಣದಲ್ಲಿ 50ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ.

ABOUT THE AUTHOR

...view details