ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
"ಅಕ್ಟೋಬರ್ 19ರಂದು ಬೆಳಗ್ಗೆ 11:15ಕ್ಕೆ ನಾನು ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದ ಪ್ರಯುಕ್ತ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡುತ್ತಿದ್ದೇನೆ" ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ. "ಕಲಿಕೆ ಮತ್ತು ನಾವೀನ್ಯತೆಯ ಪ್ರಮುಖ ಕೇಂದ್ರದಲ್ಲಿ ಈ ವಿಶೇಷ ಸಂದರ್ಭದಲ್ಲಿ ಭಾಗವಾಗಲು ಎದುರು ನೋಡುತ್ತಿದ್ದೇನೆ" ಎಂದು ಹೇಳಿದ್ದಾರೆ.
ಮೈಸೂರು ವಿಶ್ವವಿದ್ಯಾಲಯವನ್ನು 1916ರಲ್ಲಿ ಸ್ಥಾಪಿಸಲಾಯಿತು. ಇದು ಕರ್ನಾಟಕದ ಮೊದಲ ವಿಶ್ವವಿದ್ಯಾಲಯ ಮತ್ತು ದೇಶದ ಆರನೇ ವಿಶ್ವವಿದ್ಯಾಲಯವಾಗಿದೆ.
ಪ್ರಧಾನಮಂತ್ರಿಗಳ ಕಚೇರಿ ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಕರ್ನಾಟಕ ರಾಜ್ಯಪಾಲರು ಮತ್ತು ಇತರ ಗಣ್ಯರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು, ಸಂಸದರು, ಶಾಸಕರು, ಎಂಎಲ್ಸಿಗಳು, ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ಇತರರು ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡ ಆನ್‌ಲೈನ್ ಮೂಲಕ ಸಮಾರಂಭಕ್ಕೆ ಸಾಕ್ಷಿಯಾಗುತ್ತಾರೆ ಎಂದಿದೆ.