ಕರ್ನಾಟಕ

karnataka

ETV Bharat / bharat

ಪರೀಕ್ಷಾ ಪೇ ಚರ್ಚಾ... ಜನವರಿ 20ರಂದು ವಿದ್ಯಾರ್ಥಿಗಳು, ಶಿಕ್ಷಕರೊಂದಿಗೆ ನಮೋ ಸಂವಾದ! - ವಿದ್ಯಾರ್ಥಿಗಳು, ಶಿಕ್ಷಕರೊಂದಿಗೆ ನಮೋ ಸಂವಾದ

ವಿದ್ಯಾರ್ಥಿಗಳು ಪರೀಕ್ಷೆ ನಡೆಸಲು ಸಜ್ಜುಗೊಳ್ಳುತ್ತಿರುವ ಬೆನ್ನಲ್ಲೇ ಅವರೊಂದಿಗೆ ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ.

PM Modi
ಪ್ರಧಾನಿ ನರೇಂದ್ರ ಮೋದಿ

By

Published : Jan 1, 2020, 10:46 PM IST

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಚಾಯ್​ ಪೇ ಚರ್ಚಾ ಕಾರ್ಯಕ್ರಮ ನಡೆಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ಪರೀಕ್ಷಾ ಪೇ ಚರ್ಚಾ ಎಂಬ ಕಾರ್ಯಕ್ರಮ ನಡೆಸಲು ನಮೋ ಮುಂದಾಗಿದ್ದಾರೆ.

ಈಗಾಗಲೇ ನಿಗದಿಯಾಗಿದ್ದ ಪ್ರಕಾರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಜನವರಿ 16ರಂದು ನಡೆಯಬೇಕಾಗಿತ್ತು. ಆದರೆ, ದೇಶದಲ್ಲಿ ಪೊಂಗಲ್, ಮಕರ ಸಂಕ್ರಾತಿ, ​​ಲೋಹ್ರಿ, ಓಣಂ ಹಾಗೂ ವಿವಿಧ ಹಬ್ಬಗಳಿರುವ ಕಾರಣ ಜನವರಿ 16ರ ಬದಲಿಗೆ ಜನವರಿ 20ರಂದು ಈ ಕಾರ್ಯಕ್ರಮ ನಡೆಯಲಿದೆ.

ಈ ವೇಳೆ, ಪ್ರಧಾನಿ ಮೋದಿ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದು, ಪರೀಕ್ಷೆಗಳನ್ನ ಯಾವ ರೀತಿಯಾಗಿ ಎದುರಿಸಬೇಕು ಹಾಗೂ ಯಾವ ರೀತಿಯಲ್ಲಿ ತಯಾರಿ ನಡೆಸಬೇಕು ಎಂಬುದರ ಕುರಿತು ಮೋದಿ ಮಾಹಿತಿ ನೀಡಲಿದ್ದಾರೆ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details