ನವದೆಹಲಿ:ವಾರಣಾಸಿ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾಗಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರದ ಆಯ್ದ ವ್ಯಕ್ತಿಗಳೊಂದಿಗೆ ಇಂದು ಬೆಳಗ್ಗೆ 11 ಗಂಟೆಗೆ ಸಂವಾದ ನಡೆಸಲಿದ್ದಾರೆ.
"ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ವಾರಣಾಸಿಯಲ್ಲಿನ ನಾಗರಿಕರು ಮತ್ತು ಸಾಮಾಜಿಕ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿರುವ ಜನರು, ನಿರ್ಗತಿಕರಿಗೆ ಸಂಪೂರ್ಣ ಸಮರ್ಪಣೆಯೊಂದಿಗೆ ಸಹಾಯ ಮಾಡುವುದಲ್ಲದೇ, ಸ್ಥಳೀಯ ಆಡಳಿತಕ್ಕೆ ಎಲ್ಲಾ ರೀತಿಯ ಸಹಾಯ ನೀಡುತ್ತಿದ್ದಾರೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.