ನವದೆಹಲಿ: ಶನಿವಾರವಷ್ಟೇ ಕೊರೊನಾ ಲಸಿಕಾ ಅಭಿವೃದ್ಧಿ ಹಾಗೂ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಪ್ರಧಾನಿ ಮೋದಿ ಇಂದು ಮೂರು ಲಸಿಕಾ ಅಭಿವೃದ್ಧಿ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ.
ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದು, ಲಸಿಕೆ ಕುರಿತು ಇನ್ನಷ್ಟು ಮಾಹಿತಿ ಪಡೆಯಲಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿದೆ.