ಕರ್ನಾಟಕ

karnataka

ETV Bharat / bharat

ಪ್ರಧಾನಿ ಮೋದಿ ಫ್ರಾನ್ಸ್ ಪ್ರವಾಸ... ಭಯೋತ್ಪಾದನೆ ನಿರ್ಮೂಲನೆ ಬಗ್ಗೆ ಮಹತ್ವದ ಚರ್ಚೆ ಸಾಧ್ಯತೆ - pm modi

ಪ್ರಧಾನಿ ಮೋದಿಯವರ ಎರಡು ದಿನದ ಫ್ರಾನ್ಸ್ ಪ್ರವಾಸದಲ್ಲಿ ರಕ್ಷಣೆ, ಭಯೋತ್ಪಾದನೆ ನಿರ್ಮೂಲನೆ, ಸಾಗರೋತ್ತರ ಭದ್ರತೆ ಹಾಗೂ ನ್ಯೂಕ್ಲಿಯರ್ ಎನರ್ಜಿ ಬಗ್ಗೆ ಚರ್ಚೆ ನಡೆಯಲಿದೆ.

ಪ್ರಧಾನಿ ಮೋದಿ

By

Published : Aug 22, 2019, 8:05 AM IST

ನವದೆಹಲಿ:ಪ್ರಧಾನಿ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಫ್ರಾನ್ಸ್ ಪ್ರವಾಸ ಆರಂಭಿಸಲಿದ್ದು, ಈ ವೇಳೆ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯೆಲ್ ಮ್ಯಾಕ್ರೋನ್ ಜತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಪ್ರಧಾನಿ ಮೋದಿಯವರ ಎರಡು ದಿನದ ಫ್ರಾನ್ಸ್ ಪ್ರವಾಸದಲ್ಲಿ ರಕ್ಷಣೆ, ಭಯೋತ್ಪಾದನೆ ನಿರ್ಮೂಲನೆ, ಸಾಗರೋತ್ತರ ಭದ್ರತೆ ಹಾಗೂ ನ್ಯೂಕ್ಲಿಯರ್ ಎನರ್ಜಿ ಬಗ್ಗೆ ಚರ್ಚೆ ನಡೆಯಲಿದೆ.

ಗುರುವಾರ ಸಂಜೆ ವೇಳೆಗೆ ಪ್ರಧಾನಿ ಮೋದಿ ಫ್ರಾನ್ಸ್ ತಲುಪಲಿದ್ದು, ರಾತ್ರಿ ಫ್ರಾನ್ಸ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಆ ಬಳಿಕ ಅಧ್ಯಕ್ಷ ಮ್ಯಾಕ್ರೋನ್ ಏರ್ಪಡಿಸಿರುವ ವಿಶೇಷ ಭೋಜನಕೂಟದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.

ಈ ಪ್ರವಾಸದಲ್ಲಿ ಫ್ರಾನ್ಸ್​ನಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಏರ್ ​ಇಂಡಿಯಾ ವಿಮಾನ ದುರಂತದಲ್ಲಿ ಮಡಿದವರ ಸ್ಮಾರಕವನ್ನು ಮೋದಿ ಉದ್ಘಾಟನೆ ಮಾಡಲಿದ್ದಾರೆ.

ABOUT THE AUTHOR

...view details