ನವದೆಹಲಿ: ಬಿಹಾರದಲ್ಲಿ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ವೋಟಿಂಗ್ ನಡೆಯುತ್ತಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
"ಇಂದು ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಸುತ್ತಿನ ಮತದಾನ ನಡೆಯುತ್ತಿದೆ. ಕೋವಿಡ್‌ಗೆ ಸಂಬಂಧಿಸಿದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಪ್ರಜಾಪ್ರಭುತ್ವದ ಈ ಉತ್ಸವದಲ್ಲಿ ಭಾಗವಹಿಸುವಂತೆ ನಾನು ಎಲ್ಲಾ ಮತದಾರರನ್ನು ಕೋರುತ್ತೇನೆ. 6 ಅಡಿ ದೂರ ಕಾಪಾಡಿಕೊಳ್ಳಿ ಮತ್ತು ಮಾಸ್ಕ್ ಧರಿಸಿ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.