ಕರ್ನಾಟಕ

karnataka

ETV Bharat / bharat

ಬದಲಾವಣೆ ಗಮನಿಸಿ: ಸಂಜೆ 4ರ ಬದಲು ರಾತ್ರಿ 8ಕ್ಕೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ! - ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

ಪ್ರಧಾನಿ ಮೋದಿ ಭಾಷಣದ ಪ್ರಮುಖ ಅಜೆಂಡಾದ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ ಇತ್ತೀಚೆಗೆ ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಮಹತ್ವದ ನಿರ್ಧಾರದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಧಾನಿ ಮೋದಿ

By

Published : Aug 8, 2019, 11:56 AM IST

Updated : Aug 8, 2019, 2:49 PM IST

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದು, ಭಾಷಣದ ಸಮಯ ಇದೀಗ ಬದಲಾಗಿದೆ. ರಾತ್ರಿ ಎಂಟು ಗಂಟೆಗೆ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಮೊದಲು ಮೋದಿ ಸಂಜೆ ನಾಲ್ಕು ಗಂಟೆಗೆ ಮಾತನಾಡಲಿದ್ದಾರೆ ಎನ್ನಲಾಗಿತ್ತು.

ಪ್ರಧಾನಿ ಮೋದಿ ಭಾಷಣದ ಪ್ರಮುಖ ಅಜೆಂಡಾದ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ ಇತ್ತೀಚೆಗೆ ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಮಹತ್ವದ ನಿರ್ಧಾರದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದೆ. ಪ್ರಧಾನಿ ಮೋದಿ ಇಂದಿನ ತಮ್ಮ ಭಾಷಣದಲ್ಲಿ ಇದೇ ವಿಚಾರವಾಗಿ ಮಾತನಾಡುವ ಸಾಧ್ಯತೆ ಇದೆ.

Last Updated : Aug 8, 2019, 2:49 PM IST

ABOUT THE AUTHOR

...view details