ನವದೆಹಲಿ:ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಉತ್ತಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಪ್ರದೇಶಗಳಿಂದ ಕೆವಾಡಿಯಾವನ್ನು ಸಂಪರ್ಕಿಸುವ ಎಂಟು ರೈಲುಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದ್ರು.
09103/04 ಕೆವಾಡಿಯಾ-ವಾರಣಾಸಿ ಮಹಾಮಣ ಎಕ್ಸ್‌ಪ್ರೆಸ್ (ವಾರದಲ್ಲಿ ಒಂದು ದಿನ), 02927/28 ದಾದರ್-ಕೆವಾಡಿಯಾ ಎಕ್ಸ್‌ಪ್ರೆಸ್ (ದೈನಂದಿನ), 09247/48 ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್‌ಪ್ರೆಸ್ (ದೈನಂದಿನ), 09145/46 ನಿಜಾಮುದ್ದೀನ್ - ಕೆವಾಡಿಯಾ ಎಕ್ಸ್‌ಪ್ರೆಸ್ (ವಾರಕ್ಕೆ 2 ಬಾರಿ) 09105/06 ಕೆವಾಡಿಯಾ - ರೇವಾ ಎಕ್ಸ್‌ಪ್ರೆಸ್ (ವಾರದಲ್ಲಿ ಒಂದು ದಿನ), 09119/20 ಚೆನ್ನೈ - ಕೆವಾಡಿಯಾ ಎಕ್ಸ್‌ಪ್ರೆಸ್ (ವಾರದಲ್ಲಿ ಒಂದು ದಿನ), 09107/08 ಪ್ರತಾಪನಗರ-ಕೆವಾಡಿಯಾ ಎಂಇಎಂಯು ರೈಲು (ದೈನಂದಿನ) ಮತ್ತು 09109/10 ಕೆವಾಡಿಯಾ-ಪ್ರತಾಪನಗರ ಎಂಇಎಂಯು ರೈಲು (ದೈನಂದಿನ) ಗಳಿಗೆ ಮೋದಿ ಚಾಲನೆ ನೀಡಿದ್ರು.
ರೈಲ್ವೆ ಸಚಿವಾಲಯದ ಪ್ರಕಾರ, ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ಸ್‌ಪ್ರೆಸ್‌ಗೆ ಹೊಸ ಯುಗದ "ವಿಸ್ಟಾ-ಡೋಮ್ ಟೂರಿಸ್ಟ್ ಕೋಚ್" ಒದಗಿಸಲಾಗಿದ್ದು, ಇದು ಸ್ಕೈಲೈನ್‌ನ ವಿಹಂಗಮ ನೋಟವನ್ನು ನೀಡುತ್ತದೆ.