ನವದೆಹಲಿ:ಬಹುನೀರಿಕ್ಷಿತ ಪಾಕಿಸ್ತಾನದ ಕರ್ತಾರ್‌ಪುರ್ ಸಾಹಿಬ್ ಸಂಪರ್ಕಿಸುವ ಕರ್ತಾರ್‌ಪುರ್ ಕಾರಿಡಾರ್ ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ನವೆಂಬರ್ 8 ರಂದು ಉದ್ಘಾಟನೆಗೊಳ್ಳಲಿದೆ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಗುರು ನಾನಕ್ ದೇವ್ ಅವರ ಆಶೀರ್ವಾದದಿಂದ ನವೆಂಬರ್ 8ರಂದು ಭಾರತದ ಕರ್ತಾರ್ ಪುರ್ ಕಾರಿಡಾರ್ ಯೋಜನೆ ಉದ್ಘಾಟನೆಯಾಗಲಿದ್ದು, ಈ ಮೂಲಕ ಅವರು ಹೊಸ ಇತಿಹಾಸ ಸೃಷ್ಟಿ ಮಾಡಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಮನಮೋಹನ್ ಸಿಂಗ್ಗೆ ಪಾಕ್ ಆಹ್ವಾನ, ಒಪ್ಪಲ್ಲ ಎಂದ ಕಾಂಗ್ರೆಸ್!
ಇದೇ ವೇಳೆ ಕಳೆದ 72 ವರ್ಷಗಳಲ್ಲಿ ಕಾಂಗ್ರೆಸ್ನಿಂದ ಮಾಡಲು ಸಾಧ್ಯವಾಗದ ಕೆಲಸವನ್ನು ಇದೀಗ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ. ನವೆಂಬರ್ನಲ್ಲಿ ಗುರು ನಾನಕ್ 550ನೇ ಜಯಂತಿ ಆಚರಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 8ರಂದು ಭಾರತದಲ್ಲಿನ ಕರ್ತಾರ್ಪುರದ ಕಾರಿಡಾರ್ ಯೋಜನೆ ಉದ್ಘಾಟನೆ ನಡೆಯಲಿದೆ. ಕರ್ತಾರ್ಪುರ ಕಾರಿಡಾರ್ ಕುರಿತು ಭಾರತ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಅನೇಕ ಸಲ ಸಭೆ ನಡೆಸಿದ್ದರು.
ಯೋಜನೆ ಉದ್ಘಾಟನೆ ನವೆಂಬರ್ 8ರಂದು ನಡೆಯಲಿದ್ದು, ಅದಕ್ಕಾಗಿ ಪಾಕ್ನಿಂದ ಪ್ರಧಾನಿ ನರೇಂದ್ರ ಮೋದಿ ಬದಲಿಗೆ ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಗೆ ಆಹ್ವಾನ ನೀಡಲು ಮುಂದಾಗಿದ್ದೇವೆ ಎಂದು ಅಲ್ಲಿನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಹೇಳಿಕೆ ನೀಡಿದ್ದರು.