ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಏಪ್ರಿಲ್ 6 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂತ್ರಿಗಳ ಸಭೆ ನಡೆಸಲಿದ್ದಾರೆ.
ಸೋಮವಾರ ಸಚಿವ ಸಂಪುಟ ಸಭೆ ನಡೆಸಲಿರುವ ಮೋದಿ: ಲಾಕ್ಡೌನ್ ಕುರಿತು ನಿರ್ಧಾರ ಸಾಧ್ಯತೆ - ಪ್ರಧಾನಿ ಮೋದಿ ಸಭೆ
ಕೊರೊನಾ ವೈರಸ್ ಬಾಧಿಸಿದ ನಂತರ, ಪ್ರಧಾನಿ ಮೋದಿ ಕಳೆದ ಮಾರ್ಚ್ 24ರಿಂದ ದೇಶಾದ್ಯಂತ ಲಾಕ್ಡೌನ್ ಘೋಷಣೆ ಮಾಡಿದ್ದರು. ಸದ್ಯ ಲಾಕ್ ಡೌನ್ ಏಪ್ರಿಲ್ 14ರವರೆಗೆ ಇರಲಿದ್ದು, ಲಾಕ್ಡೌನ್ ಮುಂದುವರಿಸುವ ಕುರಿತು ಅಥವಾ ನಿರ್ಬಂಧ ತೆಗೆದುಹಾಕುವ ಕುರಿತು ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ.
ಪ್ರಧಾನಿ ಮೋದಿ

ಈಗಾಗಲೇ ದೇಶದ ವಿವಿಧ ರಾಜ್ಯಗಳ ಪರಿಸ್ಥಿತಿಗಳನ್ನು ಅರಿಯುವ ನಿಟ್ಟಿನಲ್ಲಿ ನಿನ್ನೆ ಪ್ರಧಾನಿ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದರು. ಸೋಮವಾರ ಮತ್ತೆ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.