ನವದೆಹಲಿ:ಇಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಮನೆಯಲ್ಲಿ ಯೋಗ, ಕುಟುಂಬದೊಂದಿಗೆ ಯೋಗ ಘೋಷವಾಕ್ಯದ ಅಡಿಯಲ್ಲಿ ಈ ಬಾರಿಯ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಪ್ರಧಾನಿ ಮೋದಿ ಈ ಕುರಿತು ಮಾತನಾಡಿದ್ದಾರೆ.
ಕೊರೊನಾ ಮಹಾಮಾರಿಯ ಕಾರಣಕ್ಕೆ ಈ ಬಾರಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಕೊರೊನಾ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳು ಯೋಗದಿಂದ ಆರೋಗ್ಯ ಸುಧಾರಿಸಿಕೊಳ್ಳುತ್ತಿದ್ದಾರೆ. ಅವರು ಸೋಂಕಿನಿಂದ ಹೊರಬರಲು ಯೋಗ ಸಹಾಯ ಮಾಡುತ್ತದೆ. ಯೋಗ ಮಾನಸಿಕ ಆರೋಗ್ಯವನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.