ನವದೆಹಲಿ:ಭಾರತ- ಚೀನಾ ನಡುವೆ ಲಡಾಕ್ನ ಗಲ್ವಾನ್ ಪ್ರದೇಶದಲ್ಲಿ ನಡೆದಿರುವ ಹಿಂಸಾತ್ಮಕ ಸಂಘರ್ಷಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.
ಭಾರತ-ಚೀನಾ ಸಂಘರ್ಷದ ವಿಚಾರವಾಗಿ ಮಾತನಾಡಿದ ಸೋನಿಯಾ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ನಮ್ಮ ಯೋಧರ ಬಲಿದಾನ ವ್ಯರ್ಥವಾಗಲು ಬಿಡಲ್ಲ: ಚೀನಾಕ್ಕೆ ನಮೋ ಕಠಿಣ ಸಂದೇಶ
ನಮ್ಮ ದೇಶದ ಎಷ್ಟು ಭೂಪ್ರದೇಶಗಳನ್ನು ಚೀನಾ ವಶಪಡಿಸಿಕೊಂಡಿದೆ? ಅವರೊಂದಿಗೆ ಸರ್ಕಾರ ಯಾವ ರೀತಿಯಾಗಿ ನಡೆದುಕೊಳ್ಳುತ್ತಿದೆ? ತೆಗೆದುಕೊಂಡಿರುವ ನಿರ್ಣಯಗಳೇನು? ಅನ್ನೋದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ವೇಳೆ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿರುವ ಸೋನಿಯಾ ಗಾಂಧಿ, ಯೋಧರು ವೀರ ಮರಣವನ್ನಪ್ಪಿರುವ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.