ನವದೆಹಲಿ: ಆಕ್ಸ್‌ಫರ್ಡ್ ಮತ್ತು ಅಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ಅಭಿವೃದ್ಧಿ ಮಾಡಲಾಗಿರುವ ಕೋವಿಶೀಲ್ಡ್ ಹೆಸರಿನ ಲಸಿಕೆಯ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದ್ದು ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಲ್ಯಾಬ್ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ:ಬೆಂಗಳೂರು ಟೆಕ್ ಶೃಂಗಸಭೆ 2020: ಜನರ ಜೀವನ ಬದಲಿಸಿದ ಡಿಜಿಟಲ್ ಲೋಕ - ಮೋದಿ ಬಣ್ಣನೆ
ಏಳು ಸಂಸ್ಥೆಗಳಿಗೆ ಉಚಿತ ಕ್ಲಿನಿಕಲ್ ಟೆಸ್ಟ್, ಮರುಪರಿಶೀಲನೆ ಹಾಗೂ ವಿಶ್ಲೇಷಣೆಗಾಗಿ ಕೊರೊನಾ ಲಸಿಕೆ ತಯಾರಿಸಲು ಸೆಂಟ್ರಲ್ ಡ್ರಗ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಅನುಮತಿ ನೀಡಿದೆ. ಇವುಗಳ ಪೈಕಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(SII)ಹಾಗೂ ಜೆನ್ನೋವಾ ಬಯೋಫಾರ್ಮಾಸಿಟಿಕಲ್ಸ್ ಸಹ ಸೇರಿದ್ದು ಶನಿವಾರ ಇದರ ಪರಿಶೀಲನೆ ಮಾಡಲು ಪ್ರಧಾನಿಗಳು ಬರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.