ಬೆಂಗಳೂರು: ರಾಜ್ಯದಲ್ಲಿನ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಅದರಲ್ಲೂ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ರಾಜ್ಯ ಸರ್ಕಾರವನ್ನು ಮತ್ತಷ್ಟು ಬಲಪಡಿಸಿವೆ. ಈ ಹಿನ್ನೆಲೆ ಮೋದಿ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.
ಯಡಿಯೂರಪ್ಪ ಸರ್ಕಾರವನ್ನು ಮೋದಿ ಅಭಿನಂದಿಸಿದ್ದಾರೆ. ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟರ್ ನಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. 'ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃ ದೃಢೀಕರಿಸುತ್ತದೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ: ದೃಢೀಕರಿಸುತ್ತದೆ.ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.