ನವದೆಹಲಿ: ಕೇಂದ್ರ ಸರ್ಕಾರದ ಆರೋಗ್ಯ ವಿಮಾ ಯೋಜನೆಯ ಆಯುಷ್ಮಾನ್ ಭಾರತ್ ಮತ್ತು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನಾ (ಪಿಎಂಜೆಎವೈ) ಅಡಿ ಕಳೆದ ಒಂದು ವರ್ಷದಲ್ಲಿ 90 ಸಾವಿರ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗಿದೆ.
ಕೇಂದ್ರ ಸರ್ಕಾರದ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಹಾಗೂ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಮೂಲಕ, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ಏಕರೂಪದ ನಿಯಮಗಳನ್ನು ರೂಪಿಸುವ ಉದ್ದೇಶದಿಂದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ) ಮತ್ತು ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ (ಎನ್‌ಸಿಜಿ) ಒಪ್ಪಂದಕ್ಕೆ ಸಹಿ ಹಾಕಿದ್ದವು. ದೇಶದಾದ್ಯಂತ ಇರುವ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳು, ಸಂಶೋಧನಾ ಸಂಸ್ಥೆಗಳು, ರೋಗಿಗಳ ಗುಂಪು ಹಾಗೂ ಚಾರಿಟೇಬಲ್ ಟ್ರಸ್ಟ್‌ಗಳ ನಡುವೆ ಒಂದು ಜಾಲ ಸೃಷ್ಟಿಸಿ ಕ್ಯಾನ್ಸರ್ ರೋಗಿಗಳ ಚಿಕಿತ್ಸಾ ಸೇವೆಗಳನ್ನು ಒಂದೇ ವೇದಿಕೆಗೆ ತಂದಿತು.