ಕರ್ನಾಟಕ

karnataka

ETV Bharat / bharat

ಸರ್ವಪಕ್ಷ ಸಭೆಯಲ್ಲಿ ಮೋದಿ ಹೇಳಿಕೆಗೆ ಆಕ್ರೋಶ: ಪ್ರಧಾನಿ ಕಚೇರಿಯಿಂದ ಸ್ಪಷ್ಟನೆ - ಪ್ರಧಾನಿ ಮೋದಿ ಹೇಳಿಕೆ

ನಮ್ಮ ಭೂಭಾಗವನ್ನು ಯಾರೊಬ್ಬರೂ ಆಕ್ರಮಿಸಿಕೊಂಡಿಲ್ಲ. ನಮ್ಮ ಒಂದಿಂಚು ಜಾಗದ ಮೇಲೂ ಕಣ್ಣು ಹಾಕಲು ಬೇರೆಯವರಿಗೆ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದರು.

PMO
PMO

By

Published : Jun 20, 2020, 4:23 PM IST

ನವದೆಹಲಿ:ಭಾರತ-ಚೀನಾ ಗಡಿ ಪ್ರದೇಶದಲ್ಲಿ ನಡೆದ ಸಂಘರ್ಷದ ವಿಚಾರವಾಗಿ ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ್ದ ಮೋದಿ, ಭಾರತದ ಯಾವುದೇ ಭಾಗವನ್ನು ಚೀನಾ ಅತಿಕ್ರಮಣ ಮಾಡಿಕೊಂಡಿಲ್ಲ, ಇದಕ್ಕೆ ಅವಕಾಶವನ್ನೂ ನೀಡುವುದಿಲ್ಲ ಎಂದು ಹೇಳಿದ್ದರು.

ಚೀನಾ ಸೈನಿಕರು ಭಾರತದ ಗಡಿ ಪ್ರವೇಶ ಮಾಡಿಲ್ಲವೆಂದರೆ ಭಾರತದ 20 ಯೋಧರು ಹುತಾತ್ಮರಾಗಿದ್ದು ಹೇಗೆ? ಎಂಬ ಪ್ರಶ್ನೆ ಉದ್ಭವವಾಗಿತ್ತು. ಹೀಗಾಗಿ ಪ್ರಧಾನಿ ಹೇಳಿಕೆಗೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಕಚೇರಿ ಸ್ಪಷ್ಟನೆ ನೀಡಿದೆ. ವಾಸ್ತವ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಉಲ್ಲಂಘಿಸುವ ಯಾವುದೇ ಪ್ರಯತ್ನಗಳಿಗೆ ಭಾರತ ತಕ್ಕ ಉತ್ತರ ನೀಡಲಿದೆ ಎಂದು ಪ್ರಧಾನಿ ತಿಳಿಸಿರುವುದಾಗಿ ಟ್ವೀಟ್ ಮಾಡಿದೆ.

ಲೈನ್​​ ಆಫ್ ಆಕ್ಚುವಲ್ ಕಂಟ್ರೋಲ್​ ಉಲ್ಲಂಘನೆಗೆ ಸಂಬಂಧಿಸಿದಂತೆ, ಜೂನ್ 15 ರಂದು ಗಾಲ್ವಾನ್‌ನಲ್ಲಿ ಉಭಯ ದೇಶಗಳ ಸೈನಿಕರ ಮಧ್ಯೆ ಘರ್ಷಣೆ ನಡೆದಿತ್ತು.

ABOUT THE AUTHOR

...view details