ನವದೆಹಲಿ:ಲಡಾಕ್‌ನ ಗಾಲ್ವನ್ ಕಣಿವೆಯಲ್ಲಿ ನಡೆದಿದ್ದ ಹಿಂಸಾತ್ಮಕ ಸಂಘರ್ಷ ಸಂಬಂಧ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಈ ಮಹತ್ವದ ಸಭೆಗೆ ದೆಹಲಿಯಲ್ಲಿ ಅಧಿಕಾರದಲ್ಲಿರುವ ಸಿಎಂ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಹಾಗೂ ಬಿಹಾರದ ಆರ್‌ಜೆಡಿ ಪಕ್ಷಕ್ಕೆ ಆಹ್ವಾನ ನೀಡಿಲ್ಲ.
ಪ್ರಧಾನಿ ನೇತೃತ್ವದ ಸರ್ವಪಕ್ಷಗಳ ನಾಯಕರ ಸಭೆಗೆ ಎಎಪಿ, ಆರ್‌ಜೆಡಿಗಿಲ್ಲ ಆಹ್ವಾನ - ಎಎಪಿ
ಪೂರ್ವ ಲಡಾಖ್‌ನಲ್ಲಿ ನಡೆದಿರುವ ಭಾರತ-ಚೀನಾ ಗಡಿ ಘರ್ಷಣೆ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಆದ್ರೆ ಈ ಸಭೆಗೆ ಆಮ್ ಆದ್ಮಿ ಹಾಗೂ ಬಿಹಾರದ ಆರ್‌ಜೆಡಿ ಪಕ್ಷಕ್ಕೆ ಆಹ್ವಾನ ನೀಡಿಲ್ಲ.
ಪ್ರಧಾನಿಯಿಂದ ಸಂಜೆ ಸರ್ವಪಕ್ಷ ಸಭೆ; ಎಎಪಿ, ಆರ್‌ಜೆಡಿಗಿಲ್ಲ ಆಹ್ವಾನ
ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಆರ್‌ಜೆಡಿ ನಾಯಕ, ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿಯಾದವ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವರ ಬಳಿ ಸರ್ವಪಕ್ಷ ಸಭೆಯನ್ನು ಕರೆಯುವ ಮಾನದಂಡಗಳನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated : Jun 19, 2020, 2:35 PM IST