ನವದೆಹಲಿ:ಬೈಕ್‌ನಲ್ಲಿ ಬಂದು ಕಳ್ಳತನ ಮಾಡಿ ಪರಾರಿಯಾಗುವ ಕಳ್ಳರು ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ಈ ಸಲ ಪ್ರಧಾನಿ ನರೇಂದ್ರ ಮೋದಿಯವರ ಸೊಸೆಯ ಬ್ಯಾಗ್ ಎಗರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೊಸೆ ದಮಯಂತಿ ಬೆನ್ ಮೋದಿಯವರ ಬ್ಯಾಗ್ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ. ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದಿರುವ ದುಷ್ಕರ್ಮಿಗಳು ದಮಯಂತಿ ಬ್ಯಾಗ್ ಕಸಿದುಕೊಂಡಿದ್ದಾರೆ. ಬ್ಯಾಗ್ನಲ್ಲಿ ಎರಡು ಮೊಬೈಲ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಹಾಗೂ 56 ಸಾವಿರ ನಗದು ರೂ ಇತ್ತು ಎಂದು ತಿಳಿದು ಬಂದಿದೆ.