ಗುಹಾವಟಿ: ರಾಷ್ಟ್ರೀಯ ಪೌರತ್ವ ನೋಂದಣಿ ಅಂತಿಮ ಪಟ್ಟಿ ಬಿಡುಗಡೆಗೂ ಮುನ್ನವೆ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಕವನಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆ 10 ಮಂದಿ ವಿರುದ್ಧ ಅಸ್ಸೋಂನಲ್ಲಿ ಎಫ್ಐಆರ್ ದಾಖಲಾಗಿದೆ.
ರಾಷ್ಟ್ರೀಯ ಪೌರತ್ವ ನೋಂದಣಿ (NRC)ಯು ಅಸ್ಸೋಂನಲ್ಲಿನ ಅಕ್ರಮ ವಲಸಿಗರನ್ನು ಹೊರಗಿಡಲಿದೆ. ಈ ಮೂಲಕ ಮುಸ್ಲಿಂ ಸಮುದಾಯದವರನ್ನು ಟಾರ್ಗೆಟ್ ಮಾಡಲಾಗ್ತಿದೆ ಎಂಬ ಕವನಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಈ ಸಂಬಂಧ ಗುವಾಹಟಿಯ ಪತ್ರಕರ್ತರೊಬ್ಬರು ಕವಿಗಳು, ಸಾಮಾಜಿಕ ಹೋರಾಟಗಾರರು ಸೇರಿ 10 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. 10 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿರುವ ಪೊಲೀಸರು, ಕವನಗಳ ನಿಖರತೆಗಾಗಿ ಸೋಶಿಯಲ್ ಮೀಡಿಯಾದಲ್ಲಿ ಜಾಲಾಡುತ್ತಿದ್ದಾರೆ.