ಲಖನೌ(ಉತ್ತರ ಪ್ರದೇಶ):ನಗರದ ಐಕಾನಿಕ್ ಕ್ಲಾಕ್ ಟವರ್ ಬಳಿ ಸಿಎಎ ವಿರೊಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಸಮಾಜವಾದಿ ಪಕ್ಷದ ಮಾಜಿ ಸಚಿವ ಖಾನ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.
ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್: ಪೊಲೀಸರ ವಿರುದ್ಧ ಭುಗಿಲೆದ್ದ ಆಕ್ರೋಶ - ಸಿಎಎ ವಿರೊಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್
ಉತ್ತರ ಪ್ರದೇಶದ ಲಖನೌದಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಹಲವರನ್ನು ಬಂಧಿಸಿದ್ದಾರೆ.
![ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್: ಪೊಲೀಸರ ವಿರುದ್ಧ ಭುಗಿಲೆದ್ದ ಆಕ್ರೋಶ Police lathi-charge](https://etvbharatimages.akamaized.net/etvbharat/prod-images/768-512-6289437-thumbnail-3x2-vicky.jpg)
ಸಿಎಎ ವಿರೋಧಿಸಿ ಲಖನೌದಲ್ಲಿ ನಡೆಯುತ್ತಿರುವ ಪ್ರತಿಭಟನೆ 47ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಮುಂಜಾನೆ ಉತ್ತರ ಪ್ರದೇಶ ಪೊಲೀಸರು, ಮಹಿಳೆಯರು ಸೇರಿದಂತೆ ಮಕ್ಕಳ ಮೇಲೆಯೂ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಇದೇ ವೇಳೆ, ಪೊಲೀಸರು ಐದು ವರ್ಷದ ಬಾಲಕಿಯೊಬ್ಬರನ್ನ ಬಂಧಿಸಿ ಕರೆದೊಯ್ದಿದ್ದು, ದಾರಿ ಮಧ್ಯೆ ಜೀಪಿನಿಂದ ಬಾಲಕಿಯನ್ನು ಕೆಳಗೆ ತಳ್ಳಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆಯ ನಂತರ, ಪೊಲೀಸರು ಲಿಖಿತ ಹೇಳಿಕೆ ನೀಡಿದ್ದು, ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರಕ್ಕೆ ಯತ್ನಿಸುತ್ತಿದ್ದವರನ್ನು ಮಾತ್ರ ಬಂಧಿಸಲಾಗಿದ್ದು, ಜನ ಸಾಮಾನ್ಯರನ್ನಾಗಲಿ, ಮಕ್ಕಳನ್ನಾಗಲಿ ಬಂಧಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.