ರಾಂಚಿ:ಪೊಲೀಸ್ ಅಧಿಕಾರಿಯೊಬ್ಬ ತನ್ನಿಬ್ಬರು ಮಕ್ಕಳು ಹಾಗು ಮಡದಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಂಚಿಯಲ್ಲಿ ಬಡಗಾಯಿ ನಗರದಲ್ಲಿ ನಡೆದಿದೆ.
ತನಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಮಡದಿ, ಮಕ್ಕಳನ್ನು ಬರ್ಬರವಾಗಿ ಕೊಲೆಗೈದ ಪೊಲೀಸ್ ಅಧಿಕಾರಿ! - police personnel killed to family,
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಅಕ್ಷರಶಃ ಬೆಚ್ಚಿ ಬಿದ್ದಿದೆ. ನಗರದಲ್ಲಿ ಪೊಲೀಸ್ ಅಧಿಕಾರಿಯೇ ತಮ್ಮ ಕುಟುಂಬವನ್ನು ಬರ್ಬರವಾಗಿ ಕೊಲೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.
ಕುಟುಂಬವನ್ನು ಬರ್ಬರವಾಗಿ ಕೊಲೆ ಮಾಡಿದ ಪೊಲೀಸ್ ಅಧಿಕಾರಿ
ತನ್ನ ಕುಟುಂಬವನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದ ಬ್ರಿಜೇಶ್ ತನ್ನ ಮಡದಿ ಸೇರಿದಂತೆ ಮುದ್ದಾದ ಮಕ್ಕಳನ್ನು ಸಹ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಬಳಿಕ ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರು ಆರೋಪಿ ಬ್ರಿಜೇಶ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.
ಕೊಲೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Last Updated : Feb 1, 2020, 11:30 AM IST
TAGGED:
ಪೊಲೀಸ್ ಅಧಿಕಾರಿಯಿಂದ ಕೊಲೆ,