ಚಿಂದ್ವಾರ (ಮಧ್ಯ ಪ್ರದೇಶ):ಸೆಲ್ಫಿ ತೆಗೆದುಕೊಳ್ಳಲು ಹೋದ ಸಹೋದರಿಯರಿಬ್ಬರು ನೀರಿನ ಪ್ರವಾಹದಲ್ಲಿ ಸಿಲುಕಿ ಒದ್ದಾಡಿದ ಘಟನೆ ಚಿಂದ್ವಾರದ ಪೆಂಚ್ ನದಿಯಲ್ಲಿ ನಡೆದಿದೆ.
ಸೆಲ್ಫಿ ತೆಗೆದುಕೊಳ್ಳಲು ಹೋಗಿ ನದಿ ಪ್ರವಾಹದಲ್ಲಿ ಸಿಲುಕಿದ ಸಹೋದರಿಯರು! - ನದಿಯಲ್ಲಿ ಸಿಕ್ಕಿಹಾಕಿಕೊಂಡ ಯುವತಿಯರು
ಸೆಲ್ಫಿ ತೆಗೆದುಕೊಳ್ಳಲು ಹೋದ ಸಹೋದರಿಯರಿಬ್ಬರು ನದಿಯಲ್ಲಿಯೇ ಸಿಕ್ಕಿಹಾಕಿಕೊಂಡರು. ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
![ಸೆಲ್ಫಿ ತೆಗೆದುಕೊಳ್ಳಲು ಹೋಗಿ ನದಿ ಪ್ರವಾಹದಲ್ಲಿ ಸಿಲುಕಿದ ಸಹೋದರಿಯರು! trapped in water](https://etvbharatimages.akamaized.net/etvbharat/prod-images/768-512-8149619-975-8149619-1595556732736.jpg)
trapped in water
ಪ್ರವಾಹದಲ್ಲಿ ಸಿಲುಕಿದ ಸಹೋದರಿಯರು
ಯುವತಿಯರು ನೀರಿಗಿಳಿದಾಗ ನೀರಿನ ಹರಿವು ಕಡಿಮೆ ಇತ್ತು. ಬಳಿಕ ಇದ್ದಕ್ಕಿದ್ದಂತೆ ತೀವ್ರಗೊಂಡಿದ್ದು, ಇಬ್ಬರೂ ನದಿಯಲ್ಲಿಯೇ ಸಿಕ್ಕಿಹಾಕಿಕೊಂಡರು. ತಕ್ಷಣ ಈ ಕುರಿತು ಪೊಲೀಸ್ ಮತ್ತು ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಲಾಯಿತು.
ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ರಕ್ಷಿಸಿದ್ದಾರೆ. ಇಬ್ಬರು ಸಹೋದರಿಯರು ಸುಮಾರು ಒಂದು ಗಂಟೆ ನದಿಯ ಮಧ್ಯದಲ್ಲಿ ಸಿಲುಕಿಕೊಂಡು ಒದ್ದಾಡಿದರು.
Last Updated : Jul 24, 2020, 11:31 AM IST