ಕರ್ನಾಟಕ

karnataka

ETV Bharat / bharat

ಲೋಕಸಭೆಯಲ್ಲೂ ಕರ್ನಾಟಕ ರಾಜಕೀಯದ ಸದ್ದು: ಆರೋಪ ಪ್ರತ್ಯಾರೋಪ

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಸಂಸತ್ತಿಗೆ ತಲುಪಿದ್ದು. ಲೋಕಸಭೆಯಲ್ಲಿ ಕಾಂಗ್ರೆಸ್ ಬಿಜೆಪಿ ನಾಯಕರ ಮಧ್ಯೆ ಪರಸ್ಪರ ವಾಗ್ವಾದಕ್ಕೂ ಕಾರಣವಾಗಿದೆ.

ಲೋಖ ಸಭೆಯಲ್ಲಿ ಸಲೋಕ ಸಭೆಯಲ್ಲಿ ಕೇಂದ್ರ ಸಚಿವ ರಾಜ ನಾಥ್ ಸಿಂಗ್ ಮಾತನಾಡಿದರುಲೋಕ ಸಭೆಯಲ್ಲಿ ಕೇಂದ್ರ ಸಚಿವ ರಾಜ್ ಸಿಂಗ್ ಮಾತನಾಡಿದರುಚಿವ ರಾಜ್ ನಾಥ್ ಸಿಂಗ್

By

Published : Jul 8, 2019, 1:37 PM IST

Updated : Jul 8, 2019, 2:29 PM IST

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೂ ನಮಗೂ ಯಾವುದೇ ಸಂಬಂಧವಿಲ್ಲ. ನಮ್ಮ ಪಕ್ಷ ಯಾವತ್ತೂ ಕುದುರೆ ವ್ಯಾಪಾರಕ್ಕೆ ಕೈ ಹಾಕಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ವಿಚಾರ ಪ್ರಸ್ತಾಪಿಸಿದ ಕಾಂಗ್ರೆಸ್​ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಲು ನೋಟಿಸ್​ ನೀಡಿದೆ. ಬಿಜೆಪಿ, ಜೆಡಿಎಸ್​- ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರ ಬೀಳಿಸಲು ಮುಂದಾಗಿದೆ ಎಂದು ಆರೋಪಿಸಿದೆ. ಈ ವಿಷಯದ ಬಗ್ಗೆ ಕಾಂಗ್ರೆಸ್​ ಹಾಗೂ ಬಿಜೆಪಿ ಸಂಸದರ ಮಧ್ಯೆ ವಾಗ್ವಾದ ನಡೆಯಿತು.

ಲೋಕ ಸಭೆಯಲ್ಲಿ ಕೇಂದ್ರ ಸಚಿವ ರಾಜ ನಾಥ್ ಸಿಂಗ್ ಮಾತನಾಡಿದರು

ಈ ಬಗ್ಗೆ ಹೇಳಿಕೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ನಾವು ಸಮ್ಮಿಶ್ರ ಸರ್ಕಾರವನ್ನ ಬೀಳಿಸುವ ಪ್ರಯತ್ನ ಮಾಡಿಲ್ಲ , ಕಾಂಗ್ರೆಸಿನ ದಿಗ್ಗಜರೊಬ್ಬರು ಮೊದಲು ರಾಜಿನಾಮೆ ನೀಡಿದ್ದರು. ಉಳಿದವರು ಅವರನ್ನೇ ಅನುಸರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

Last Updated : Jul 8, 2019, 2:29 PM IST

ABOUT THE AUTHOR

...view details