ಕರ್ನಾಟಕ

karnataka

By

Published : Jan 11, 2021, 6:22 PM IST

ETV Bharat / bharat

ನಾವು ಕೊರೊನಾ ವಾರಿಯರ್ಸ್​ ಅಲ್ಲ; ರಾಜಕಾರಣಿಗಳಿಗೆ ಮೊದಲ ವ್ಯಾಕ್ಸಿನ್ ಇಲ್ಲ: ಮೋದಿ

ದೇಶಾದ್ಯಂತ ಜನವರಿ 16ರಿಂದ ಕೋವಿಡ್ ವ್ಯಾಕ್ಸಿನ್ ಲಸಿಕೆ ಹಂಚಿಕೆಯಾಗಲಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಮೂಲಕ ಮಹತ್ವದ ಸಭೆ ನಡೆಸಿದರು.

pm modi
pm modi

ನವದೆಹಲಿ:ದೇಶಾದ್ಯಂತ ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್​ಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ರಾಜಕಾರಣಿಗಳಿಗೆ ಮೊದಲ ವ್ಯಾಕ್ಸಿನ್​ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಓದಿ: ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ; ಕೆಲ ತಿಂಗಳಲ್ಲಿ 30 ಕೋಟಿ ಜನರಿಗೆ ವ್ಯಾಕ್ಸಿನ್​​: ಪ್ರಧಾನಿ

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಮಾತು ಸ್ಪಷ್ಟಪಡಿಸಿದ್ದು, ಯಾವುದೇ ಕಾರಣಕ್ಕೂ ರಾಜಕಾರಣಿಗಳು ಆರಂಭದಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳುವಂತಿಲ್ಲ. ಈ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜಕಾರಣಿಗಳಿಗೆ ಮೊದಲ ವ್ಯಾಕ್ಸಿನ್ ಇಲ್ಲ: ಮೋದಿ

ಚುನಾಯಿತ ಪ್ರತಿನಿಧಿಗಳು ಕೊರೊನಾ ವಾರಿಯರ್ಸ್ ಅಲ್ಲ. ನಾವು ಈ ವರ್ಗದಲ್ಲಿ ಬರುವುದಿಲ್ಲ ಎಂದಿರುವ ಮೋದಿ, ರಾಜಕಾರಣಿಗಳಿಗೆ ಮೊದಲ ವ್ಯಾಕ್ಸಿನ್​ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್​ ವಿರುದ್ಧದ ಹೋರಾಟದಲ್ಲಿ ನಾವು ನಿರ್ಣಾಯಕ ಘಟ್ಟ ತಲುಪಿದ್ದು, ಜನವರಿ 16ರಿಂದ ದೇಶಾದ್ಯಂತ ಲಸಿಕೆ ಹಂಚಿಕೆ ಅಭಿಯಾನ ಆರಂಭಗೊಳ್ಳಲಿದೆ ಎಂದು ಅವರು ಹೇಳಿದರು.

ABOUT THE AUTHOR

...view details