ಕರ್ನಾಟಕ

karnataka

ETV Bharat / bharat

ದೇಶದಲ್ಲಿ 5 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ; 149 ಮಂದಿ ಬಲಿ ಪಡೆದ ಕೊರೊನಾಸುರ - ಭಾರತ ಕೊರೊನಾ ಅಪ್ಡೇಟ್​

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಈವರೆಗೆ ದೇಶದಲ್ಲಿ 149 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 4,643 ಜನ ಚಿಕಿತ್ಸೆ ಪಡೆಯುತ್ತಿದ್ದು, ದೇಶದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 5,194ಕ್ಕೇರಿದೆ.

india corona update
ಕೊರೊನಾ ಪಾಸಿಟಿವ್​

By

Published : Apr 8, 2020, 10:32 AM IST

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 773 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದೇ ಸಮಯದಲ್ಲಿ 10 ಜನ ಸಾವನ್ನಪ್ಪಿದ್ದಾರೆ. ಸದ್ಯ ದೇಶದ ಕೊರೊನಾ ಪ್ರಕರಣ 5,000 ಗಡಿ ದಾಟಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ ಈವರೆಗೆ ದೇಶದಲ್ಲಿ 149 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 4,643 ಜನ ಚಿಕಿತ್ಸೆ ಪಡೆಯುತ್ತಿದ್ದು, ದೇಶದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 5,194ಕ್ಕೇರಿದೆ.

ದೇಶದ ಒಟ್ಟು ಕೊರೊನಾ ಪ್ರಕರಣ (ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶ)

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸಾವುನೋವು:

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,018ಕ್ಕೇರಿದ್ದು, ಈವರೆಗೆ ಇಲ್ಲಿ 64 ಜನ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಮಹಾರಾಷ್ಟ್ರದಲ್ಲಾಗಿದೆ. ನೆರೆಯ ತಮಿಳುನಾಡಿನಲ್ಲಿ ಈವರೆಗೆ 690 ಕೊರೊನಾ ಪ್ರಕರಣ ವರದಿಯಾಗಿದೆ. ರಾಜಧಾನಿ ದೆಹಲಿಯಲ್ಲಿ 576, ತೆಲಂಗಾಣದಲ್ಲಿ 364 ಹಾಗೂ ಕೇರಳದಲ್ಲಿ ಒಟ್ಟು 336 ಪ್ರಕರಣಗಳು ವರದಿಯಾಗಿದೆ.

ರಾಜ್ಯವಾರು ಸೋಂಕಿತರ ಪಟ್ಟಿ(ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶ)

ಗುಜರಾತ್​ ಹಾಗೂ ಮಧ್ಯ ಪ್ರದೇಶದಲ್ಲಿ ತಲಾ 13 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ABOUT THE AUTHOR

...view details