ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ ದೇಶದ ಜನರ ಮೆಚ್ಚುಗೆ ಗಳಿಸಿದೆ. ಬರೋಬ್ಬರಿ ಏಳು ದಶಕಗಳ ವಿವಾದಕ್ಕೆ ತೆರೆ ಎಳೆಯುವಲ್ಲಿ ದೇಶದ ಅತ್ಯುನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಪರಿಶ್ರಮ ಕಡಿಮೆಯೇನಲ್ಲ. ಇವತ್ತು ಐತಿಹಾಸಿಕ ತೀರ್ಪು ಪ್ರಕಟಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಸಾಂವಿಧಾನಿಕ ಪೀಠದ ನ್ಯಾಯಮೂರ್ತಿಗಳಿಗೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯಿ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನವೆಂಬರ್ 17ರಂದು ನಿವೃತ್ತಿ ಹೊಂದುತ್ತಿದ್ದಾರೆ. ಇದ್ರ ಬೆನ್ನಲ್ಲೇ ಅತ್ಯಂತ ವಿವಾದಿತ ಪ್ರಕರಣದ ಬಗ್ಗೆ ದೇಶ ಮೆಚ್ಚಿದ ತೀರ್ಪು ಪ್ರಕಟಿಸಿದ ಸಂವಿಧಾನಿಕ ಪೀಠದ ನಾಲ್ವರು ನ್ಯಾಯಾಧೀಶರಿಗೆ ಅವರು ಔತಣಕೂಟ ಏರ್ಪಡಿಸಿದ್ದಾರೆ.